Header Ads
Header Ads
Breaking News

ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ನಡೆಯಿತು. ಕಾರ್ಕಳ ತಾಲೂಕು ಅಡಳಿತ ಮತ್ತು ಸಹಾಯಕ ಮತದಾರರ ನೋಂದಣಿ ಅಧಿಕಾರಿ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ ಜಂಟಿ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಅಮೃತ ಎಸ್ ರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವಜನಾಂಗ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದಲ್ಲಿ ಒಳ್ಳೆಯ ಅಡಳಿತ, ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಾಧ್ಯ ಎಂದರು.

ಇದೇ ಸಂದರ್ಭದಲ್ಲಿ ಭುವನೇಂದ್ರ ಶಾಲೆಯ ದೈಹಿಕ ಶಿಕ್ಷಕರಾದ ಸಂಜಯ್ ಕುಮಾರ್ ಯುವ ಮತದಾರ ಹಾಗೂ ವಿದ್ಯಾರ್ಥಿ ಗಳಿಗೆ ಪ್ರಮಾಣವಚನ ಹಾಗೂ ಬೋದನೆ ನಡೆಸಲಾಯಿತು.ಹೊಸ ಮತದಾರಿಗೆ ಮತ ಕಾರ್ಡ್ ವಿತರಿಸಲಾಯಿತು.

ಮುಖ್ಯ ಅತಿಥಿಯಾಗಿ ಕಾರ್ಕಳ ಉಪವಿಭಾಗ ಸಹಾಯಕ ಪೊಲೀಸ್ ಅಧಿಕ್ಷರಾದ ಪಿ. ಕೃಷ್ಣ ಕಾಂತ್ ,ತಾ ಪಂ ಕಾರ್ಯನಿರ್ವಣಾಧಿಕಾರಿ ಡಾ ಹರ್ಷ ಮೇಜರ್, ಪುರಸಭೆ ಮುಖ್ಯ ಅಧಿಕಾರಿ ಮೇಬಲ್ ಡಿ ಸೋಜಾ,ಭುವನೇಂದ್ರ ಕಾಲೇಜು ಪ್ರಾಂಶುಪಾಲ ಡಾ ಮಂಜುನಾಥ್ ಕೊಟ್ಯಾನ್, ಮತದಾರ ಸಂಚಾಲಕರಾದ ರವಿ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply