Header Ads
Header Ads
Breaking News

ನವೆಂಬರ್ 12ರಂದು ಕಾರ್ಕಳ ತಾಲೂಕು ಆಸ್ಪತ್ರೆ ನೂತನ ಕಟ್ಟಡ ಉದ್ಘಾಟನೆ

ಕಾರ್ಕಳ : ಸಾರ್ವಜನಿಕ ತಾಲೂಕು ಆಸ್ಪತ್ರೆಯ ನೂತನ ಕಟ್ಟಡ ನ. 12ರಂದು ಲೋಕಾರ್ಪಣೆಯಾಗಲಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು. ಆರೋಗ್ಯ ಸಚಿವ ಬಿ. ಶ್ರೀರಾಮುಲು ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಗೃಹ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಯಿ ಶಸ್ತ್ರ ಚಿಕಿತ್ಸಾ ವಿಭಾಗವನ್ನು ಉದ್ಘಾಟಿಸಲಿದ್ದು, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲ ಹಂತದ ಜನಪ್ರತಿನಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಸಕರು ಮಾಹಿತಿ ನೀಡಿದರು. ಬಡವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹತ್ತಾರು ಸೌಲಭ್ಯದೊಂದಿಗೆ ಕಾರ್ಕಳ ತಾಲೂಕು ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ತುರ್ತುಚಿಕಿತ್ಸಾ ವಿಭಾಗ, ಶಸ್ತ್ರ ಚಿಕಿತ್ಸಾ, ಪ್ರಯೋಗಶಾಲಾ, ಕ್ಷ ಕಿರಣ, ಹೆರಿಗೆ, ಡಯಾಲಿಸಿಸ್ ವಿಭಾಗ, ನವಜಾತ ಆರೈಕೆ ಘಟಕ, ಮಕ್ಕಳ ಆರೋಗ್ಯ ಪುನಶ್ಚೇತನ ಕೇಂದ್ರ, ಸಂವಹನ ರಹಿತ ಕಾಯಿಲೆಗಳ ವಿಭಾಗ, ತೀವ್ರ ನಿಗಾ ಘಟಕ, ಸೋನಾಲಜಿ, ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರ, ಔಷಧ ವಿತರಣಾ ಕೇಂದ್ರ, ಶೈತ್ಯಾಗಾರ, ಅಡುಗೆ ಕೋಣೆಯನ್ನು ನೂತನ ಕಟ್ಟಡ ಒಳಗೊಂಡಿದೆ ಎಂದರು.  ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹಾವೀರ ಹೆಗ್ಡೆ, ವಕ್ತಾರ ಹರೀಶ್ ಶೆಣೈ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *