Header Ads
Breaking News

ಕಾರ್ಕಳ : ಸ್ವಂತ ಮಕ್ಕಳನ್ನೇ ಸಾಕಾಲಾಗದೇ ಮಾರಾಟಕ್ಕೆ ಮುಂದಾದ ತಂದೆ

ಕಾರ್ಕಳ: ತನ್ನಿಬ್ಬರು ಎಳೆಯ ಮಕ್ಕಳನ್ನು ಸಾಕಾಲಾಗದೇ ತಂದೆಯೊಬ್ಬ ಮಾರಾಟ ಮಾಡಲು ಮುಂದಾಗಿರುವ ವಿಲಕ್ಷಣ ಘಟನೆ ಕಾರ್ಕಳ ತಾಲೂಕಿನ ಬೈಲೂರು ಸಮೀಪದ ನೀರೆ ಎಂಬಲ್ಲಿ ನಡೆದಿದೆ. ನೀರೆಯ ದಲಿತ ಸಮುದಾಯಕ್ಕೆ ಸೇರಿದ ಆನಂದ ಎಂಬಾತ ತನ್ನಿಬ್ಬರು ಮಕ್ಕಳನ್ನು ಹಣಕ್ಕಾಗಿ ಮಾರಾಟಕ್ಕೆ ಮುಂದಾಗಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತಂದೆಯನ್ನು ವಿಚಾರಣೆ ಮಾಡಿ ಬಳಿಕ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮಕ್ಕಳಿಬ್ಬರನ್ನು ಉಡುಪಿ ಸಂತೆಕಟ್ಟೆಯ ಕೃಷ್ಣಾನುಗ್ರಹ ದತ್ತು ಸಂಸ್ಥೆಗೆ ಒಪ್ಪಿಸಿದ್ದಾರೆ.

ಸುದ್ಧಿ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ, ನೀರೆ ಪಂಚಾಯತ್ ಪಿಡಿಓ ಅಂಕಿತಾ ನಾಯಕ್ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಸುರಕ್ಷತೆ ಬಗ್ಗೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದು ಇಬ್ಬರು ಪುಟ್ಟ ಮಕ್ಕಳನ್ನು ದತ್ತು ಸಂಸ್ಥೆಗೆ ಸೇರಿಸಿ ಪುನರ್ವಸತಿ ಕಲ್ಪಿಸಿದ್ದಾರೆ.

Related posts

Leave a Reply

Your email address will not be published. Required fields are marked *