Header Ads
Header Ads
Breaking News

ಕಾರ್ಕಳ : ಹುತಾತ್ಮರಾದ ಸೈನಿಕರಿಗೆ ಮೌನ ಪ್ರಾರ್ಥನೆ

ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಚುನಾವಣಾ ಸಾಕ್ಷರತ್ ಸಂಘದ ವತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ಕಾರ್ಕಳ ತಾಲೂಕು ದಂಡಾಧಿಕಾರಿಯಾದ ಮಹಮ್ಮದ್ ಇಸಾಕ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶಕಟ್ಟುವಲ್ಲಿ ಯುವಕರು ಮುಂದೆ ಬರಬೇಕು ಯುವಕರು ಖಡ್ಡಾಯವಾಗಿ ಮತದಾನ ಮಾಡಬೇಕು ಮತ್ತು ಮತದಾನ ಮಾಡಿಸಬೇಕು. ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ನಮ್ಮ ದೇಶ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಿನ್ನೆ ಹುತಾತ್ಮರಾದ ಸೈನಿಕರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಿದರು. ಜಾಥವು ಕಾರ್ಕಳ ಬಂಡಿಮಠದಿಂದ ಕಾಲೇಜಿನಲ್ಲಿ ಸಮಾಪ್ತಿಗೊಂಡಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ, ಕೃಷ್ಣಮೂರ್ತಿ ವೈದ್ಯ ಕುಕ್ಕುಂದೂರು ಗ್ರಾಮ ಪಂಚಾಯ್ತಿ ಅಧಿಕಾರಿ ಸುಧಾಕರ ಶೆಟ್ಟಿ ಹಾಗೂ ತಾಲೂಕು ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *