Header Ads
Header Ads
Breaking News

ಕಾರ್ಮಿಕರ ವಿವಿಧ ಬೇಡಿಕೆಗಳನ್ನ ಈಡೇರಿಸಲು ಒತ್ತಾಯ:ಮಂಗಳೂರಿನ ಡಿಸಿ ಕಚೇರಿ ಮುಂಭಾಗದಲ್ಲಿ ಸಿಪಿಐಎಂ ಧರಣಿ

ಕಾರ್ಮಿಕರ ವಿವಿಧ ಬೇಡಿಕೆಗಳನ್ನ ಈಡೇರಿಸಲು ಒತ್ತಾಯಿಸಿ, ಜಿಲ್ಲಾ ಸಿಪಿಐಎಂ ನೇತೃತ್ವದಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಕೆ.ಆರ್.ಶ್ರೀಯಾನ್ ಮಾತನಾಡಿ, ಪಂಚರಾಜ್ಯದ ಚುನಾವಣೆಯಲ್ಲಿ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನ ಅನುಸರಿಸುತ್ತಿದೆ ಎಂಬುದಕ್ಕೆ ಈ ಚುನಾವಣೆ ನಿರ್ದಶನವಾಗಿದೆ ಎಂದು ಅವರು ಹೇಳಿದರು.

ಕಮ್ಯೂನಿಷ್ಟ್ ಪಕ್ಷ ಜನರ ಸಮಸ್ಯೆಗಳ ವಿರುದ್ಧ ಹೋರಾಟ ಮಾಡುತ್ತಿದೆ. ಅಧಿಕಾರದ ಆಸೆ ಇಲ್ಲದೇ ಕೆಲಸ ಮಾಡುವ ಪಕ್ಷವಾಗಿದೆ ಎಂದು ಅವರು ಹೇಳಿದರು. ಈ ವೇಳೆ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಬಾಲಕೃಷ್ಣ ಶೆಟ್ಟಿ, ಸಿಪಿಐಎಂ ಮೂಡಬಿದ್ರೆ ವಲಯ ಕಾರ್ಯದರ್ಶಿ ಯಾದವ ಶೆಟ್ಟಿ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

Related posts

Leave a Reply