Header Ads
Breaking News

ಕಾರ್ಮಿಕ ಕಲ್ಯಾಣ ಮಂಡಳಿಗೆ ರೋಹಿಣಿ ಸಿಂಧೂರಿ ಮರು ನೇಮಕಕ್ಕೆ ಆಗ್ರಹ : ಸಿಐಟಿಯು ಸುಳ್ಯ ತಾಲೂಕು ಅಧ್ಯಕ್ಷ ಕೆ.ಪಿ.ಜಾನಿ ಒತ್ತಾಯ

ಕಟ್ಟಡ ಕಾರ್ಮಿಕರ ಪರವಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಮತ್ತು ಮಂಡಳಿಯನ್ನು ಪಾರದರ್ಶಕವಾಗಿ ಮುನ್ನಡೆಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ. ಕಟ್ಟಡ ಕಾರ್ಮಿಕರ ಮಂಡಳಿಯ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ಅವರನ್ನು ಮರು ನೇಮಕ ಮಾಡಬೇಕು ಎಂದು ಸುಳ್ಯ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಕೆ.ಪಿ.ಜಾನಿ ಆಗ್ರಹಿಸಿದ್ದಾರೆ. ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಹೆಚ್.ಕೆ. ನಾಗರಾಜ್, ಕಾರ್ಮಿಕ ಮುಖಂಡರಾದ ಬಿಜು ಅಗಸ್ಟಿನ್, ಪುಟ್ಟಣ್ಣ. ಕೆ, ವಿ. ಗಣೇಶ್, ವಿ.ಆರ್. ಪ್ರಸಾದ್, ಮೋನಪ್ಪ, ನಾಗರಾಜ್ ಕಲ್ಲುಮುಟ್ಲು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *