Header Ads
Breaking News

ಕಾಲೇಜು ವಿದ್ಯಾರ್ಥಿಗಳ ಜೊತೆ ಮುಕ್ತ ಚರ್ಚೆಗೆ ಮೆಂಟರ್‌ಗಳ ತಜ್ಞರ ತಂಡ ರಚನೆ: ಡಿಸಿ ಡಾ. ಸಶಿಕಾಂತ್ ಸೆಂಥಿಲ್

ಕಾಲೇಜುಗಳಲ್ಲಿ ಮೊಬೈಲ್ ಬಳಕೆ, ಸಾಮಾಜಿಕ ಜಾಲತಾಣಗಳು ಮತ್ತು ಮಾದಕವಸ್ತುಗಳಿಂದ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ. ಇಂತಹ ದುಶ್ಚಟಗಳಿಗೆ ಬಲಿಯಾಗುವ ವಿದ್ಯಾರ್ಥಿಗಳನ್ನು ಸರಿ ದಾರಿಗೆ ತರುವ ಉದ್ದೇಶದಿಂದ ಜಿಲ್ಲೆಯ ಕಾಲೇಜುಗಳ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಮುಕ್ತ ಚರ್ಚೆಗೆ ಮೆಂಟರ್‌ಗಳ ತಜ್ಞರ ತಂಡಗಳನ್ನು ರಚನೆ ಮಾಡಿ ಕಾಲೇಜುಗಳಿಗೆ ತಜ್ಞರ ಬೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸಶಿಕಾಂತ್ ಸೆಂಥಿಲ್ ಹೇಳಿದರು.

ಅವರು ಸುಳ್ಯ ತಾಲೂಕು ಕಚೇರಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿ ಇಂದಿನ ವಿದ್ಯಾರ್ಥಿಗಳು ತಾಂತ್ರಿಕವಾಗಿ ಬಹಳ ವೇಗವಾಗಿ ಬೆಳೆಯುತ್ತಿದ್ದಾರೆ. ಅವರಿಗೆ ಪೋಷಕರಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಕ್ತವಾಗಿ ಮಾತನಾಡಲು ಅವಕಾಶ ಮಾಡಿಕೊಡಬೇಕು. ವಿದ್ಯಾರ್ಥಿಗಳು ದಾರಿ ತಪ್ಪುವುದನ್ನು ತಪ್ಪಿಸಲು ವಿದ್ಯಾರ್ಥಿಗಳು ಪಠ್ಯದ ಹೊರತಾಗಿ ವಾರದಲ್ಲಿ ಒಂದು ಅಥವಾ ಎರಡು ಬಾರಿ ಅರ್ಧ ಗಂಟೆ ಮೆಂಟರ್‌ಗಳ ತಜ್ಞರ ತಂಡದ ಬಳಿ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಹೇಳಿಸುವ ಕೆಲಸ ಮಾಡುತ್ತೇವೆ. ಈ ತಜ್ಞರ ತಂಡ ಡಬ್ಯುಎಚ್‌ಒದಲ್ಲಿ ತರಭೇತಿ ಪಡೆದ ತಂಡವಾಗಿದೆ.

ಈ ವಾರದಲ್ಲಿ ಈ ತಜ್ಞರ ತಂಡದ ರೂಪುರೇಷೆ ತಯಾರಾಗುತ್ತದೆ. ಒಂದು ಅಥವಾ ಎರಡು ತಿಂಗಳ ಒಳಗೆ ಜಿಲ್ಲೆಯ ಎಲ್ಲಾ ಕಾಲೇಜುಗಳಿಗೆ ಈ ಮೆಂಟರ್‌ಗಳ ತಂಡವನ್ನು ಕಲಿಸುತ್ತೇವೆ ಎಂದು ಹೇಳಿದ ಅವರು ವಿದ್ಯಾರ್ಥಿಗಳ ವ್ಯಯಕ್ತಿಕ ಸಮಸ್ಯೆಗಳ ಪರಿಹರಿಸುವ ನಿಟ್ಟಿನಲ್ಲಿ ಈ ಕೆಲಸ ಮಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಲು ಸಾಧ್ಯವಾಗುತ್ತದೆ. ಪ್ರತಿ ಕಾಲೇಜಿನಲ್ಲಿ ಕೂಡ ವ್ಯಯಕ್ತಿಕ ಮೆಂಟರ್ ತಂಡ ಆಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಕಮಿಷನರ್ ಕೃಷ್ಣಮೂರ್ತಿ, ತಹಶೀಲ್ದಾರ್ ಕುಂಞಿ ಆಹಮ್ಮದ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *