Header Ads
Header Ads
Breaking News

ಕಾವೂರಿನಲ್ಲಿ ಸಮೂಹ ಮಾಧ್ಯಮ ಸರ್ಟಿಫಿಕೇಟ್ ಕೋರ್ಸ್ : ಸಂಸದ ನಳಿನ್ ಕುಮಾರ್ ಕಟೀಲ್‌ರಿಂದ ಉದ್ಘಾಟನೆ

ಕಾವೂರಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ಅಧ್ಯಯನ ಕೇಂದ್ರ ಸಮೂಹ ಮಾಧ್ಯಮ ಕುರಿತು ಸರ್ಟಿಫಿಕೆಟ್ ಕೋರ್ಸ್ ಮತ್ತು ಗೆಳತಿ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗಾಗಿ ಆಪ್ತ ಸಲಹಾ ಕೇಂದ್ರ ಉದ್ಘಾಟನೆಗೊಂಡಿತು.ಸಂಸದ ನಳಿನ್ ಕುಮಾರ ಕಟೀಲ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸರಕಾರಿ ಕಾಲೇಜಿನಲ್ಲಿ ಆಪ್ತ ಸಲಹಾ ಕೇಂದ್ರ, ಅಧ್ಯಯನ ಕೇಂದ್ರ ಮತ್ತು ಸಮೂಹ ಮಾಧ್ಯಮ ಕೋರ್ಸ್ ಆರಂಭಿಸಿರುವುದು ಶ್ಲಾಘನೀಯ ಎಂದು ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಮಾತನಾಡಿ, ಇಂದಿನ ಸಾಮಾಜಿಕ ಜಾಲಾತಾಣದ ಬೆಳವಣಿಗೆಯಿಂದ ಹಲವು ಅನಾಹುತಗಳಾಗುತ್ತಿವೆ. ವಿದ್ಯಾರ್ಥಿನಿಯರು ಈ ಬಗ್ಗೆ ಜಾಗೃತರಾಗಿರಬೇಕು ಎಂದು ಹೇಳಿದರು. ಆನಂತರ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು, ಗೆಳತಿ ಆಪ್ತ ಸಲಹಾ ಕೇಂದ್ರದಿಂದ ವಿದ್ಯಾರ್ಥಿನಿಯರಿಗೆ ಬಹಳಷ್ಟು ಪ್ರಯೋಜನವಾಗಲಿ ಎಂದು ಹೇಳಿದರು.
ಈ ಸಂದರ್ಭ ಪ್ರಾಂಶುಪಾಲೆ ಡಾ. ಯು ತಾರಾ, ಪ್ರಮೀಳಾ ರಾವ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *