Header Ads
Header Ads
Breaking News

ಕಾವೂರಿನ ಸರ್ಕಾರಿ ಪ. ಪೂ. ಕಾಲೇಜಿನ ಸಭಾಂಗಣದಲ್ಲಿ ವಿಷನ್ ಕುಡ್ಲ ವತಿಯಿಂದ ಕೇರಿಯರ್ ಗೈಡ್ ಲೈನ್ಸ್

ವಿಷನ್ ಕುಡ್ಲ ವತಿಯಿಂದ ಮಂಗಳೂರಲ್ಲಿ ಕೇರಿಯರ್ ಗೈಡ್ ಲೈನ್ಸ್ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ವೃತ್ತಿ ಮಾರ್ಗದರ್ಶಿ ಕುರಿತು ಉಪನ್ಯಾಸ ನೀಡಿದರು. ಸಮಾಜ ಮುಖಿ ಉದ್ದೇಶ ಇಟ್ಟು ಕೊಂಡು ಸಮಾನ ಮನಸ್ಕರು ಆರಂಭಿಸಿ ಸಂಸ್ಥೆಯೇ ವಿಷನ್ ಕುಡ್ಲ. ಎರಡು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆ ಹಲವಾರು ಸಮಾಜಮುಖಿ ಕೆಲಸವನ್ನು ಮಾಡಿಕೊಂಡು ಬಂದಿದೆ. ಇದೀಗ ಮಂಗಳೂರಿನ ಕಾವೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೇರಿಯರ್ ಗೈಡ್ ಲೈನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶೋಭಾ ಅವರ್ರು ಚಾಲನೆ ನೀಡಿದರು. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಮುಂದಿನ ದಿನಗಳಲ್ಲಿ ಉದ್ಯೋಗದಲ್ಲಿ ಯಾವ ರೀತಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಯಪಡಿಸಲು ಇದು ಸಹಕಾರಿಯಾಗಲಿದೆ ಎಂದು ಹೇಳಿದರು.ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ವೃತ್ತಿ ಮಾರ್ಗದರ್ಶಿ ಅವಕಾಶವಾಗಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಕಾವೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ತಾರಾ ಹೇಳಿದರು.ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಹಾಗೂ ಸಂಪನ್ಮೂಲ ವ್ಯಕ್ತಿಯಾಗಿರುವ ಮನೋಜ್ ಲೂಯಿಸ್ ಅವರು, ಕೇರಿಯರ್ ಗೈಡ್ ಲೈನ್ಸ್ ಕುರಿತು ಮಾಹಿತಿ ಕಾರ್ಯಾಗಾರವನ್ನ ನಡೆಸಿಕೊಟ್ಟರು. ಇದೇ ಸಂದರ್ಭ ಮತ್ತೋರ್ವಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಜುನಾಥ ಅವರು ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವ ರೀತಿಯಲ್ಲಿ ಎದುರಿಸಬೇಕು ಎಂಬುದರ ಕುರಿತು ಮಾಹಿತಿ ನೀಡಿದ್ರು. ಈ ವೇಳೆ ವಿಷನ್ ಕುಡ್ಲ ಅಧ್ಯಕ್ಷ ರಾದ ಜಿತೇಂದ್ರ ಅವರು ಉಪಸ್ಥಿತರಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಆರಂಭಗೊಂಡ ವಿಷನ್ ಕುಡ್ಲ ,ಸಾಮಾಜಿಕ ಕಾರ್ಯ ಚಟುವಟಿಕೆಯಲ್ಲಿ ತೊಡಿಗಿಸುವ ಮೂಲಕ ಇದೀಗ ವಿದ್ಯಾರ್ಥಿಗಳಿಗೆ ಕೇರಿಯರ್ ಗೈಡ್ ಲೈನ್ಸ್ ಮೂಲಕ ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಸಹಕಾರಿಯಾಗುತ್ತಿದೆ. ವಿಷನ್ ಕುಡ್ಲ ವತಿಯಿಂದ ನಡೆದ ಕಾರ್ಯಾಗಾರದಲ್ಲಿ 50ಕ್ಕೂ ಅಧಿಕ ವಿಧ್ಯಾರ್ಥಿಗಳು ಭಾಗವಹಿಸುವ ಮೂಲಕ ಈ ಕಾರ್ಯಾಗಾರವೂ ಯಶಸ್ವಿಯಾಗಿ ನಡೆಯಿತು.

Related posts

Leave a Reply