Header Ads
Header Ads
Breaking News

ಕಾವೂರು : ನನ್ನ ಪರಿವಾರ ಬಿಜೆಪಿ ಪರಿವಾರ ಅಭಿಯಾನ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನೇರವಾಗಿ ಜನಸಾಮಾನ್ಯರಿಗೆ ಉಪಯೋಗವಾಗುವಂತಹ ನೂರಾರು ಸೌಲಭ್ಯಗಳು ದೊರಕಿದ್ದು, ಬಿಜೆಪಿ ಧ್ವಜ ಅಭಿಯಾನದ ಮೂಲಕ ಮನೆ ಮನೆಗೆ ತಲುಪಿಸುವ ಕಾರ್ಯಕ್ಕೆ ಕಾವೂರಿನಲ್ಲಿ ಚಾಲನೆ ನೀಡಲಾಗಿದೆ.ಕಾವೂರಿನಲ್ಲಿ ನನ್ನ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮಕ್ಕೆ ಬಿಜೆಪಿ ವಿಭಾಗೀಯ ಸಹಪ್ರಭಾರಿ ಪ್ರತಾಪ್ ಸಿಂಹ ನಾಯಕ್ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂಬುವುದಲ್ಲಿ ಸಂಶಯವಿಲ್ಲ ಎಂದರು.
ಈ ಸಂದರ್ಭ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಸುದರ್ಶನ್, ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಕಾರ್ಯದರ್ಶಿ ರಣ್‌ದೀಪ್ ಕಾಂಚನ್, ಅಶೋಕ್ ಕೃಷ್ಣಾಪುರ, ಸುಧಾಕರ್ ಆಚಾರ್ ಅಡ್ಯಾರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *