Header Ads
Breaking News

ಕಾಸರಗೋಡಿನಲ್ಲಿ ಕೊರೋನಾ ಸೋಂಕು ಪತ್ತೆ : ಕೇರಳದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ

ಚೀನಾದಿಂದ ಆಗಮಿಸಿರುವ ಕಾಸರಗೋಡಿನ ವೈದ್ಯಕೀಯ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇರಳದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ. ಈ ಹಿನ್ನೆಲೆಯಲ್ಲಿ ಕೇರಳ ಸರಕಾರವು “ಆರೋಗ್ಯ ತುರ್ತು ಪರಿಸ್ಥಿತಿ’ ಘೋಷಿಸಿದೆ.

ಸೋಂಕು ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಭಾಯಿಸುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ತಿಳಿಸಿದ್ದಾರೆ. ಇದೇವೇಳೆ ಸೋಂಕು ದೃಢಪಟ್ಟಿರುವ ಮೂವರ ಆರೋಗ್ಯ ಸ್ಥಿತಿ “ತೃಪ್ತಿದಾಯಕ’ವಾಗಿದೆ ಎಂದು ಕೇರಳ ಸರಕಾರದ ಬುಲೆಟಿನ್ ಹೇಳಿದೆ.ವುಹಾನ್‍ನಿಂದ ಆಗಮಿಸಿದ್ದ ಕಾಸರಗೋಡಿನ ವೈದ್ಯ ವಿದ್ಯಾರ್ಥಿನಿಯಲ್ಲಿ ಸೋಂಕು ದೃಢಪಟ್ಟಿದೆ. ಈಕೆಯನ್ನು ಕಾಂಞಂಗಾಡ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‍ನಲ್ಲಿರಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ರವಿವಾರದವರೆಗೆ ಒಟ್ಟು 104 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 3 ಪಾಸಿಟಿವ್ ವರದಿ ಬಂದಿದೆ ಎಂದು ಸಚಿವೆ ಶೈಲಜಾ ಮಾಹಿತಿ ನೀಡಿದ್ದಾರೆ. ಕೇರಳದಲ್ಲಿ ಒಟ್ಟು 1,999 ಮಂದಿಯ ಮೇಲೆ ನಿಗಾ ಇರಿಸಲಾಗಿದೆ.

Related posts

Leave a Reply

Your email address will not be published. Required fields are marked *