Header Ads
Breaking News

ಕಾಸರಗೋಡಿನಲ್ಲಿ ಹೊಸ ಪ್ರಕರಣ ಇಲ್ಲ

ಮಂಜೇಶ್ವರ : ಜಿಲ್ಲೆಯಲ್ಲಿ ಸತತ ಐದನೇ ದಿನವಾದ ಮಂಗಳವಾರ ಕೂಡ ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣ ದಾಖಲಾಗಿಲ್ಲ. ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 179 ಮಂದಿಗೆ ಸೋಂಕು ತಗಲಿದ್ದು, ಇದೀಗ ಆಸ್ಪತ್ರೆಗಳಲ್ಲಿ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1135 ಮಂದಿ ಮನೆಗಳಲ್ಲಿ, 21 ಮಂದಿ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ. 262 ಮಂದಿ ತಮ್ಮ ನಿಗಾ ಅವಧಿ ಪೂರ್ಣ ಗೊಳಿಸಿದ್ದಾರೆ. 

ಕೇರಳ ರಾಜ್ಯದಲ್ಲಿ ಮಂಗಳವಾರ ಹೊಸದಾಗಿ ಮೂವರಿಗೆ ಕೊರೊನಾ ವೈರಸ್ ಸೋಂಕು ಬಾಧಿಸಿದೆ. ಈ ಮೂವರು ವಯನಾಡು ಜಿಲ್ಲೆಯವರು. ಈ ಮೂವರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಚೆನ್ನೈಗೆ ಹೋಗಿದ್ದ ಆಂಬ್ಯುಲೆನ್ಸ್ ಚಾಲಕನ ತಾಯಿ, ಪತ್ನಿ ಹಾಗು ಕ್ಲೀನರಿನ ಪುತ್ರನಿಗೆ ಸೋಂಕು ಬಾಧಿಸಿದೆ.

ರಾಜ್ಯದಲ್ಲಿ ಒಟ್ಟು 21342 ಮಂದಿ ನಿಗಾದಲ್ಲಿದ್ದು, ಈ ಪೈಕಿ 21034 ಮಂದಿ ಮನೆಗಳಲ್ಲೂ, 308 ಮಂದಿ ಆಸ್ಪತ್ರೆಗಳಲ್ಲೂ ನಿಗಾದಲ್ಲಿದ್ದಾರೆ. ರಾಜ್ಯದಲ್ಲಿ ಒಟ್ಟು 502 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಗೊಂಡಿದ್ದು, ಪ್ರಸ್ತುತ 37 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

Leave a Reply

Your email address will not be published. Required fields are marked *