Breaking News

ಕಿತ್ತು ಹೋದ ಕೆಸರುಮಯ ಜೆಪ್ಪಿನಮೊಗರು ರಸ್ತೆ, ರಸ್ತೆಯಲ್ಲೇ ಗಿಡ ನೆಟ್ಟು ಕಮ್ಯೂನಿಸ್ಟರ ಪ್ರತಿಭಟನೆ

ಮಂಗಳೂರಿನ ಜಪ್ಪಿನಮೊಗರು ಪ್ರದೇಶದಲ್ಲಿ ಕೆಟ್ಟು ಹೋಗಿರುವ ಮುಖ್ಯ ರಸ್ತೆಯನ್ನು ಕೂಡಲೇ ಸರಿಪಡಿಸಲು ಒತ್ತಾಯಿಸಿ ಹಾಗೂ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಜನಪ್ರತಿನಿಧಿಯ ಬೇಜವಾಬ್ದಾರಿಯನ್ನು ಖಂಡಿಸಿ ಸಿಪಿಐಎಂ ಹಾಗೂ ಡಿವೈಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ರಸ್ತೆಯಲ್ಲಿಯೇ ಗಿಡಗಳನ್ನು ನೆಟ್ಟು ಆ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಕೆಟ್ಟು ಹೋಗಿರುವ ರಸ್ತೆ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪಾಲಿಕೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯತನದಿಂದ ರಸ್ತೆ ಅಭಿವೃದ್ಧಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಯಿತು.

Related posts

Leave a Reply