Breaking News

ಕಿನ್ನಿಗೋಳಿಯ ತಾಳಿಪಾಡಿ ಗ್ರಾಮದ ಕೆರೆ ಮೇಲ್ಮೆ, ಶಾಸಕ ಅಭಯಚಂದ್ರ ಜೈನ್‌ರಿಂದ ಶಿಲಾನ್ಯಾಸ

ಕಿನ್ನಿಗೋಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಳಿಪಾಡಿ ಗ್ರಾಮದಲ್ಲಿ ನಬಾರ್ಡ್ ಯೋಜನೆಯಡಿಯಲ್ಲಿ ೫೦ ಲಕ್ಷ ರೂ. ವೆಚ್ಚದಲ್ಲಿ ನಡೆಯುವ ತುಡಾಮ ಕೆರೆಯ ಪುನರುಜ್ಜೀವನದ ಶಿಲನ್ಯಾಸವನ್ನು ಶಾಸಕ ಅಭಯಚಂದ್ರ ಜೈನ್ ನೆರೆವೇರಿಸಿದರು.
ಈ ವೇಳೆ ಮತನಾಡಿದ ಅವರು, ಹಳೆಯ ಕೆರೆಗಳ ಅಭಿವೃದ್ಧಿಯಿಂದ ಅಂತರ್ಜಲ ಹೆಚ್ಚಾಗಿ ಕೃಷಿ ಕಾರ್ಯಕ್ಕೆ ಹಾಗೂ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಉಪಯೋಗವಾಗಲಿದೆ ಎಂದು ತಿಳಿಸಿದರು.ಇನ್ನು ಗ್ರಾಮದಲ್ಲಿನ ಹಳೆಯ ಕೆರೆಗಳ ಅಭಿವೃದ್ದಿಯಿಂದ ಆಗ್ರಾಮ ನೀರಿನ ಸಮಸ್ಯೆ ಬಗೆಹರಿಯಲು ಸಾದ್ಯ ಎಂದು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಕಿನ್ನಿಗೋಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಿಲೋಮಿನಾ ಸಿPರ, ಜಿಲ್ಲಾ ಪಂಚಾಯತ್ ಸದಸ್ಯ ವಿನೋದ್ ಬೊಳ್ಳೂರು, ತಾ. ಪಂ. ಸದಸ್ಯ ದಿವಾಕರ ಕರ್ಕೇರ, ಎ. ಪಿ. ಎಂ.ಸಿ ಅಧ್ಯಕ್ಷ ಪ್ರಮೋದ್ ಕುಮಾರ್, ಗ್ರಾ. ಪಂ. ಉಪಾಧ್ಯಕ್ಷೆ ಸುಜಾತಾ ಪೂಜಾರಿ, ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply