Header Ads
Breaking News

ಕಿನ್ಯಾ ಮಿಂಪ್ರಿಯಲ್ಲಿ ನಿರ್ಮಿಸಿದ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಯು.ಟಿ ಖಾದರ್

ಕಿನ್ಯಾ ಮಿಂಪ್ರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವತಿಯಿಂದ ನಿರ್ಮಿಸಲಾದ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಶಾಸಕ ಯು.ಟಿ ಖಾದರ್ ಅವರು, ಕಿನ್ಯಾ ಮಿಂಪ್ರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವತಿಯಿಂದ ನಿರ್ಮಿಸಲಾದ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂದಿರಾಗಾಂಧಿ ತಂದ ಯೋಜನೆ ಅಂಗನವಾಡಿಯಾಗಿದೆ. ಮೀಂಪ್ರಿ ಭಾಗದಲ್ಲಿ ತಲೆ ಎತ್ತಿ ನಿಂತ ಅಂಗನವಾಡಿಯಿಂದ ಈ ಭಾಗದ ಮಕ್ಕಳು ಉತ್ತಮ ಪ್ರಜೆಗಳಾಗಿ ಬೆಳೆಯಲು ಅಡಿಪಾಯ ಆಗಲಿ ಎಂದರು.  ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರ ಸ್ಥಾಪನೆಗೆ ಪ್ರಯತ್ನಿಸಿದ ಕಿನ್ಯಾ ಗ್ರಾ.ಪಂ ಸದಸ್ಯ ಹಮೀದ್ ಕಿನ್ಯಾ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಹಮೀದ್ ಕಿನ್ಯ, ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಕಿನ್ಯಾ ಗ್ರಾ.ಪಂ ಅಧ್ಯಕ್ಷೆ ಮಾಲಿನಿ , ಅಭಿವೃದ್ಧಿ ಅಧಿಕಾರಿ ನವೀನ್ ಹೆಗ್ಡೆ, ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್‍ನ ನಿರ್ದೇಶಕ ಎಂ.ಎ ಮಹಮ್ಮದ್ ಬಶೀರ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *