Header Ads
Header Ads
Breaking News

ಕುಂಟಿಕಾನದ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮ

ಕುಂಟಿಕಾನದ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಭಾರತೀಯ ದಾದಿಯರ ಸಂಘದ ಪ್ರಧಾನ ಕಾರ್ಯದರ್ಶಿ ಇವೆಲಿನ್ ಪಿ. ಕಣ್ಣನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ದಾದಿಯರು ರೋಗಿಗಳನ್ನು ಸ್ವಂತ ಮನೆಯವರಂತೆ ಕಾಣಬೇಕು. ತನ್ನ ತಾಯಿಯಂತೆ ಆರೈಕೆ ಮಾಡಬೇಕು ಎಂದು ಹೇಳಿದರು.

ಆನಂತರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಅಗಮಿಸಿದ ಮಂಗಳೂರು ಪೊಲೀಸ್ ಉಪ ಆಯುಕ್ತರಾದ ಹನುಮಂತ ರಾಯ ಅವರು, ಭಾರತೀಯ ದಾದಿಯರಿಗೆ ವಿದೇಶದಲ್ಲಿ ಹೆಚ್ಚಿನ ಬೇಡಿಕೆ ಇದೆ. ಇದಕ್ಕೆ ನಮ್ಮ ಕಾರ್ಯತತ್ಪರತೆ ಮತ್ತು ಗುಣಮಟ್ಟ ಕಾರಣ ಎಂದು ಹೇಳಿದರು.

ಇದೇ ವೇಳೆ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಶಾಂತಿ ಎಸ್. ಅವರು ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಎ.ಜೆ. ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎ.ಜೆ. ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ನಿರ್ದೇಶಕರಾದ ಶಾರದಾ ಶೆಟ್ಟಿ, ಆಶ್ರಿತಾ ಪಿ ಶೆಟ್ಟಿ, ಉಪಾಧ್ಯಕ್ಷರಾದ ಡಾ. ಪ್ರಶಾಂತ್ ಶೆಟ್ಟಿ, ಪ್ರಾಂಶುಪಾಲೆ ಡಾ. ಲರಿಸ್ಸಾ ಮಾರ್ಥ ಸ್ಯಾಮ್ಸ್, ಡಾ. ಥೆರೆಸಾ ಎಲ್. ಮೆಂಡೋನ್ಸಾ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *