Header Ads
Header Ads
Breaking News

ಕುಂದಾಪುರದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ:ಮೋದಿ ಸರ್ಕಾರಕ್ಕೆ ಕಾರ್ಮಿಕ ಮುಖಂಡ ಸುರೇಶ್ ಕಲ್ಲಾಗರ ಎಚ್ಚರಿಕೆ

ಕುಂದಾಪುರ: ರಾಷ್ಟ್ರವ್ಯಾಪಿ ನಡೆಸುತ್ತಿರುವ ಎರಡು ದಿನಗಳ ಸಾರ್ವತ್ರಿಕ ಮುಷ್ಕರದ ಎರಡನೇ ದಿನವಾದ ಬುಧವಾರ ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ನಡೆದ ಬೃಹತ್ ರ್‍ಯಾಲಿ ನಡೆಸಿದರುರ್‍ಯಾಲಿ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಸಿಐಟಿಯು ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಅವರು, ಒಂದು ವೇಳೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿಯಾಗಿ ನಡೆದುಕೊಂಡರೆ, ಕಾರ್ಮಿಕ ಕಾನೂನುಗಳನ್ನು ಮುಟ್ಟಲಿಕ್ಕೆ ಬಂದರೆ ಇಡೀ ದೇಶದ ಕಾರ್ಮಿಕ ವರ್ಗ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕುದಾದ ಪಾಠವನ್ನು ಕಲಿಸುತ್ತಾರೆ. ಆ ತಾಕತ್ತು, ಆ ಸಾಮರ್ಥ್ಯ ಕಾರ್ಮಿಕ ವರ್ಗಕ್ಕೆ ಇದೆ ಎಂದು ಪ್ರಧಾನಿ ಮೋದಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಕುಂದಾಪುರ ತಾಲೂಕಿನಲ್ಲಿ ಮಂಗಳವಾರ ನಡೆದ ಕಾರ್ಮಿಕರ ಮುಷ್ಕರಕ್ಕೆ ಅಭೂತಪೂರ್ವವಾದ ಬೆಂಬಲ ಸಿಕ್ಕಿದೆ. ಕೆಲವರು ವಿರೋಧ ಮಾಡಿದರೂ ಸಹಸ್ರಾರು ಸಂಖ್ಯೆಯಲ್ಲಿ ಜನರು ಕಾರ್ಮಿಕ ಸಂಘಟನೆಗಳೊಂದಿಗೆ ಕೈಜೋಡಿಸಿದ್ದಾರೆ. ಕೇಂದ್ರ ಸರ್ಕಾರ 44 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ. ಈ 44 ಕಾರ್ಮಿಕ ಕಾನೂನುಗಳು ಕಾರ್ಮಿಕರ ಹೋರಾಟದ ಫಲವಾಗಿ ಬಂದಿರುವ ಕಾನೂನುಗಳು.44 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಬೇಡಿ, ಕಾರ್ಮಿಕರಿಗೆ ಕಲ್ಯಾಣ ಮಂಡಳಿ ರಚಿಸಿ ಎಂದು ಕಾರ್ಮಿಕ ಸಂಘಟನೆಗಳು ಕೇಂದ್ರ ಸರ್ಕಾವನ್ನು ಆಗ್ರಹಿಸಿದರೆ ಕೇಂದ್ರದ ಬಿಜೆಪಿ ಸರ್ಕಾರ 44 ಕಾನೂನುಗಳಿಗೆ ಸವಲತ್ತು ನೀಡಲು ಸರ್ಕಾರದಲ್ಲಿ ಸಂಪನ್ಮೂಲದ ಕೊರತೆ ಇದೆ ಎಂದರು.

ಪ್ರತಿಭಟನೆಯನ್ನುದ್ದೇಶಿಸಿ ಜೆಸಿಟಿಯು ನ ಸಂಚಾಲಕ ಎಚ್. ನರಸಿಂಹ ಮಾತನಾಡಿದರು. ಜೆಸಿಟಿಯು ಸಂಚಾಲಕ ಲಕ್ಷ್ಮಣ ಶೆಟ್ಟಿ, ಇಂಟೆಕ್‌ನ ಚಂದ್ರ ಅಮೀನ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಸಿಐಟಿಯುನ ಮುಖಂಡರುಗಳಾದ ವಿ. ನರಸಿಂಹ, ಮಹಾಬಲ ವಡೇರಹೋಬಳಿ, ರಾಜೇಶ್ ವಡೇರಹೋಬಳಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Related posts

Leave a Reply