Header Ads
Header Ads
Header Ads
Breaking News

ಕುಂದಾಪುರದಲ್ಲಿ ಪೌರತ್ವ ಮಸೂದೆ ವಿರೋಧಿಸಿ ಪ್ರತಿಭಟನೆ

ಕುಂದಾಪುರ :ಸಂವಿಧಾನ ರಕ್ಷಣೆಗಾಗಿ ನಡೆಸುವ ಹೋರಾಟಗಾರರನ್ನು ವ್ಯವಸ್ಥಿತವಾಗಿ ಹತ್ತಿಕ್ಕುವ ಷಡ್ಯಂತ್ರವನ್ನು ಬಿಜೆಪಿ ಮತ್ತು ಆರೆಸ್ಸೆಸ್ ನಡೆಸುತ್ತಿದೆ. ಹೋರಾಟಗಾರರನ್ನು ಹತ್ತಿಕ್ಕುವ ನೆಪದಲ್ಲಿ ಗೋಲೀಬಾರ್ ಬೆದರಿಕೆ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ಈ ಹೋರಾಟ ಚಳುವಳಿ ರೂಪ ಪಡೆದುಕೊಳ್ಳಲಿದ್ದು ಗುಂಡಿಕ್ಕುವುದಾದರೆ ಮೊದಲು ಗುಂಡು ನನ್ನ ಗುಂಡಿಗೆ ಸೀಳಲಿ ಎಂದು ವಿಶ್ ಹಿಂದೂ ಪರಿಷತ್ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರಕುಮಾರ್ ಹೇಳಿದ್ದಾರೆ.

ಅವರು ಕುಂದಾಪುರದ ಶಾಸ್ತ್ರಿಸರ್ಕಲ್ ಸಮೀಪ ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿ ಹೋರಾಟ ಸಮಿತಿ ನೇತ್ರತ್ವದಲ್ಲಿ ನಡೆದ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರೋಧಿಸಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಪ್ರತಿಭಟನಾ ಸಭೆಯಲ್ಲಿ ಪ್ರಧಾನ ಭಾಷಣ ಮಾಡಿ ಮಾತನಾಡಿದ ಅಂಕಣಕಾರ ಶಿವಸುಂದರ್, ಈ ದೇಶದಲ್ಲಿ ಇರುವ ಕೆಲವೇ ಕೆಲವು ಆಕ್ರಮ ವಲಸೆಗಾರರನ್ನು ಪತ್ತೆ ಹಚ್ಚಲು ದೇಶದ ಪ್ರತಿಯೊಬ್ಬರು ಸರದಿ ಸಾಲಿನಲ್ಲಿ ನಿಲ್ಲುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದಲ್ಲಿ ಎಷ್ಟು ಜನ ಆಕ್ರಮ ವಲಸೆಗಾರರು ಇದ್ದಾರೆ ಎನ್ನುವ ಸ್ವಷ್ಟತೆ ಕೇಂದ್ರ ಸರ್ಕಾರದ ಬಳಿ ಇಲ್ಲ ಎಂದು ಸರ್ಕಾರವನ್ನು ಟೀಕಿಸಿದರು.
ಇದೇ ವೇಳೆಯಲ್ಲಿ ಸಂವಿಧಾನದ ಹೆಸರಿನಲ್ಲಿ ಸಾಮಾಹಿಕ ಪ್ರತಿಜ್ಞೆ ಸ್ವೀಕರಿಸಲಾಯಿತು.

ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಹೋರಾಟಗಾರ ಸುಧೀರ್ ಕುಮಾರ್ ಮುರೋಳಿ, ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್, ಎಸ್‌ವೈಎಸ್ ಪ್ರಧಾನ ಕಾರ್ಯದರ್ಶಿ ಡಾ.ಎಂ.ಎಂ.ಎಸ್.ಎಂ ಅಬ್ದುಲ್ ರಶೀದ್ ಸಖಾಫಿ ಝೈನೀ ಕಾಮಿಲ್ ಮೊದಲಾದವರು ಹಾಜರಿದ್ದರು.

Related posts

Leave a Reply

Your email address will not be published. Required fields are marked *