Header Ads
Header Ads
Breaking News

ಕುಂದಾಪುರದಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ ಕಾರಿನಲ್ಲಿದ್ದ ಇಬ್ಬರು ದಾರುಣ ಸಾವು

ಕುಂದಾಪುರದ ತಾಲೂಕಿನ ಅಂಪಾರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಖಾಸಗಿ ಬಸ್ ಹಾಗೂ ಕಾರು ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಸಾವನ್ನಪ್ಪಿದ್ದು ಮೂವರು ಗಾಯಗೊಂಡ ಘಟನೆ ರವಿವಾರ ಸಂಜೆ ನಡೆದಿದೆ.ಭಾನುವಾರ ರಜಾ ದಿನವಾದ್ದರಿಂದ ಸ್ನೇಹಿತರೆಲ್ಲರೂ ಎರಡು ಕಾರಿನಲ್ಲಿ ಜೋಗ ಜಲಪಾತ ನೋಡಲು ತೆರಳುತ್ತಿದ್ದು ಸಂಜೆ ವೇಳೆ ಊರಿಗೆ ವಾಪಾಸಾಗುತ್ತಿದ್ದರು. ಕುಂದಾಪುರದ ಸಿದ್ದಾಪುರ ಮಾರ್ಗವಾಗಿ ಕುಂದಾಪುರದತ್ತ ಸಾಗುವಾಗ ಒಂದಷ್ಟು ಮಂದಿ ಚಲಿಸುತ್ತಿದ್ದ ಕಾರು ಮುಂಭಾಗದಲ್ಲಿ ತೆರಳುತ್ತಿದ್ದು ಈ ಕಾರು ಹಿಂದಿನಿಂದ ಸಂಚರಿಸು ತ್ತಿತ್ತು. ಇದೇ ವೇಳೆ ಕುಂದಾಪುರದಿಂದ ಸಿದ್ದಾಪುರದತ್ತ ಸಾಗಿಬಂದ ಖಾಸಗಿ ಬಸ್ ಸ್ಯಾಂಟ್ರೋ ಕಾರಿಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮದ್ಯೆ ದೀಕ್ಷಿತ್ ಮೃತಪಟ್ಟಿದ್ದು ಗಂಭೀರ ಗಾಯಗೊಂಡ ಕಿರಣ್ ಹಾಗೂ ಅರುಣ್ ಎಂಬಿಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವಾಗ ಕಿರಣ್ ಕೂಡ ಮೃತಪಟ್ಟಿದ್ದಾರೆ. ಸದ್ಯ ಅರುಣ್ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ತೀವೃತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

Leave a Reply