Header Ads
Header Ads
Breaking News

ಕುಂದಾಪುರ ತಾಲೂಕು ಆಡಳಿತದ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ಕುಂದಾಪುರ: ತಾಲೂಕು ಆಡಳಿತದ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಸಂಭ್ರಮ ಸಡಗರದಿಂದ ೬೪ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಆಶ್ರಯದಲ್ಲಿ ಗಾಂಧಿ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ರಾಜು ಕೆ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಪೂರ್ವದಿಂದಲೇ ಭಾಷಾವಾರು ಪ್ರಾಂತ್ಯ ರಚನೆಗೆ ಆಗ್ರಹಿಸಿ ಹೋರಾಟ ನಡೆಯುಯತ್ತಲೇ ಇತ್ತು. ಬ್ರಿಟೀಷರ ಆಡಳಿತಕ್ಕೊಳಪಟ್ಟಿದ್ದ ಮುಂಬೈ, ಮದ್ರಾಸ್ ಪ್ರಾಂತ್ಯ, ರಾಜಮನೆತನದ ಆಳ್ವಿಕೆಯಲ್ಲಿದ್ದ ಮೈಸೂರು ಪ್ರಾಂತ್ಯ, ನಿಜಾಮರ ಆಳ್ವಿಕೆಯಲ್ಲಿದ್ದ ಹೈದರಾಬಾದ್ ಕರ್ನಾಟಕ ಕೊಡಗು ಪ್ರಾಂತ್ಯಗಳನ್ನೊಳಗೊಂಡು ಏಕೀಕೃತ ಮೈಸೂರು ರಾಜ್ಯ 1956 ರಲ್ಲಿ ಉದಯವಾಯಿತು. 1973ರಲ್ಲಿ ಅಂದಿನ ಮುಖ್ಯಮಂತ್ರಿ ದಿ.ದೇವರಾಜ ಅರಸು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣ ಮಾಡಿದರು. ದೇಶದ ಸಮಗ್ರ ಅಭಿವೃದ್ಧಿಗೆ ಕರ್ನಾಟಕ ರಾಜ್ಯದ ಕೊಡುಗೆ ಅಪಾರ ಎಂದರು.
ಇನ್ನು ಸಹಾಯಕ ಆಯುಕ್ತ ರಾಜು. ಕೆ ಮಾತನಾಡಿ, ಕುಂದಾಪುರ ಪ್ರಾಚೀನ ಕಾಲದಿಂದಲೂ ಕನ್ನಡ ನಾಡಿನ ಭಾಗವಾಗಿಯೇ ಗುರುತಿಸಿಕೊಂಡಿದೆ. ಕುಂದಗನ್ನಡ ಇಲ್ಲಿನ ಪ್ರಮುಖ ಭಾಷೆಯಾದರೂ ಆಡಳಿತ ಹಾಗೂ ಶೈಕ್ಷಣಿಕ ಭಾಷೆಯಾಗಿ ಶುದ್ದ ಕನ್ನಡವನ್ನು ಬಳಸುತ್ತಿದ್ದೇವೆ ಎಂದು ಹೇಳಿದರು.
ಈ ಸಂದರ್ಭ ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಕುಂದರ್, ತಹಶೀಲ್ದಾರ್ ತಿಪ್ಪೇಸ್ವಾಮಿ, ಎಎಸ್ಪಿ ಹರಿರಾಂ ಶಂಕರ್, ಸರ್ಕಲ್ ಇನ್ಸ್‌ಪೆಕ್ಟರ್ ಮಂಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್, ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ತಾಲೂಕು ಯುವಜನಾ ಸೇವಾ ಅಧಿಕಾರಿ ಕುಸುಮಾಕರ ಶೆಟ್ಟಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ ಪೊಲೀಸ್ ಠಾಣೆಯ ಪಿಎಸ್ಸೈ ಹರೀಶ್ ಆರ್.ನಾಯ್ಕ್ ನೇತೃತ್ವದಲ್ಲಿ ಪೊಲೀಸ್, ಹೋಮ್ ಗಾರ್ಡ್, ವಿವಿಧ ಶಾಲೆಯ ಎನ್‌ಸಿಸಿ, ಸೇವಾದಳ, ಸ್ಕೌಟ್ ಎಂಡ್ ಗೈಡ್ಸ್, ಹೋಲಿ ರೋಜರಿ ವಿದ್ಯಾರ್ಥಿಗಳ ಬ್ಯಾಂಡ್‌ಸಟ್ ವಾದ್ಯದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

Leave a Reply

Your email address will not be published. Required fields are marked *