Header Ads
Header Ads
Header Ads
Breaking News

ಕುಂದಾಪುರದ ಬಿಜೆಪಿ ಕ್ಷೇತ್ರ ಸಮಿತಿಯ ಕಚೇರಿಯಲ್ಲಿ ಆಂತರಿಕ ಚುನಾವಣೆ

ಭಾರತೀಯ ಜನತಾ ಪಕ್ಷ ಕುಂದಾಪುರ ಮಂಡಲದ ನೂತನ ಅಧ್ಯಕ್ಷರಾಗಿ ಶಂಕರ ಅಂಕದಕಟ್ಟೆ ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ ಬಿಜೆಪಿ ಕೋರ್‍ಕಮಿಟಿಯಲ್ಲಿ ಎಲ್ಲಾ ಮಂಡಲಗಳ ಅಧ್ಯಕ್ಷರುಗಳ ಸಂಭಾವ್ಯ ಹೆಸರುಗಳನ್ನು ನಿರ್ಣಯಿಸಲಾಗಿದ್ದು, ಅದರಂತೆ ಕುಂದಾಪುರ ಮಂಡಲದ ಅಧ್ಯಕ್ಷ ಸ್ಥಾನಕ್ಕಾಗಿ ಸೋಮವಾರ ಸಂಜೆ ಪಕ್ಷದ ಕಛೇರಿಯಲ್ಲಿ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಶಂಕರ ಅಂಕದಕಟ್ಟೆ ಏಕಮಾತ್ರ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರಿಂದ, ನಾಮಪತ್ರ ಸಮರ್ಪಕವಾಗಿದ್ದು ಅವರನ್ನು ಮುಂದಿನ ಅಧ್ಯಕ್ಷರೆಂದು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುಂದಾಪುರ ಮಂಡಲದ ನಿಕಟಪೂರ್ವ ಅಧ್ಯಕ್ಷರಾದ ಕಾಡೂರು ಸುರೇಶ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಕೊಡ್ಗಿ ಉಪಸ್ಥಿತರಿದ್ದರು. ಕಾಡೂರು ಸುರೇಶ ಶೆಟ್ಟಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಗ್ಗೆ ವಿವರಿಸಿದರು. ಚುನಾವಣಾಧಿಕಾರಿಯಾಗಿ ಬೀಜಾಡಿ ಸುರೇಶ ಶೆಟ್ಟಿ, ಸಹಚುನಾವಣಾಧಿಕಾರಿಯಾಗಿ ದಿವಾಕರ ಕಡ್ಗಿ ಸಹಕರಿಸಿದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಂಕರ ಅಂಕದಕಟ್ಟೆ ಈ ಮೊದಲು ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಕ್ಷದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ಅವರು ನಿಭಾಯಿಸಿದ್ದಾರೆ.

Related posts

Leave a Reply

Your email address will not be published. Required fields are marked *