Header Ads
Header Ads
Breaking News

ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಬೇಟಿ ಬಚಾವೋ-ಬೇಟಿ ಪಡಾವೋ ಕಾರ್ಯಗಾರ

ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಬೇಟಿ ಬಚಾವೋ -ಬೇಟಿ ಪಡಾವೋ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಐಎಮ್‌ಎ ಕುಂದಾಪುರ ವತಿಯಿಂದ ಕಾರ್ಯಾಗಾರ ನಡೆಯಿತು.

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಕಾರ್ಯಾಗಾರವನ್ನು ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಭ್ರೂಣ ಹತ್ಯೆ, ಅತ್ಯಾಚಾರ, ಲೈಂಗಿಕ ಕಿರುಕುಳ ಇವೆಲ್ಲವುಗಳಿಂದ ಮಹಿಳೆಗೆ ಮುಕ್ತಿ ಸಿಕ್ಕಾಗ ಮಾತ್ರ ಸುಭಿಕ್ಷ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸುರತ್ಕಲ್‌ನ ಜಿಲ್ಲಾ ತರಬೇತಿ ಕೇಂದ್ರ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಸೇವೇಗಳು ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ಡಾ.ರಾಮಚಂದ್ರ ಬಾಯರಿ ದಿಕ್ಸೂಚಿ ಭಾಷಣ ಮಾಡಿದರು.ಕುಂದಾಪುರ ಸಹಾಯಕ ಆಯುಕ್ತ ಡಾ.ಮಧುಕೇಶ್ವರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ರಾಮಚಂದ್ರ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯ ಘಟಕದ ಸದಸ್ಯರಾದ ಡಾ.ಕೆ.ಎಸ್.ಕಾರಂತ್, ಕುಂದಾಪುರ ವಿಭಾಗದ ಅಧ್ಯಕ್ಷರಾದ ಡಾ.ಶೇಖರ್, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ತಾಲೂಕಾ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ವಕೀಲರಾದ ಟಿ.ಬಿ.ಶೆಟ್ಟಿ, ಮತ್ತು ಸಮಾಜ ಸೇವಕಿ ವೆರೋನಿಕಾ ಕಾರ್ವಾಲಿಯೋ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *