Header Ads
Header Ads
Breaking News

ಕುಕ್ಕುಂದೂರು ರಾಜಪುರ ಸಾರಸ್ವತ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಸಭಾಂಗಣದಲ್ಲಿ 65ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ವಿ. ಸುನಿಲ್ ಕುಮಾರ್‌ರವರು ಸಹಕಾರಿ ಸಂಸ್ಥೆ ಗ್ರಾಮೀಣ ಪ್ರದೇಶದ ಜನತೆಗೆ ಆರ್ಥಿಕ ಚಟುವಟಿಕೆ ನಡೆಸಲು ಬಹಳ ಹತ್ತಿರವಾಗಿದೆ. ಗ್ರಾಮೀಣ ಭಾಗದಲ್ಲಿ ಸಹಕಾರಿ ಸಂಸ್ಥೆಗಳು ಆರಂಭಗೊಳ್ಳದಿದ್ದರೆ ಇಂದಿಗೂ ಅಲ್ಲಿನ ಸ್ಥಿತಿ ಹಿಂದಿನಂತೆಯೇ ಇರುತಿತ್ತು. ಅವಿಭಜಿತ ದ.ಕ. ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಕೊಡುಗೆ ನೀಡಿದೆ. ಸರಕಾರವೂ ದೊಡ್ಡಮಟ್ಟದಲ್ಲಿ ಸಹಕಾರಿಯ ಮೇಲೆ ಅವಲಂಭಿತವಾಗಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶದ ಕೃಷಿಕರಿಗೆ ಸಹಾಯವಾಗುವ ಒಂದು ಕ್ಷೇತ್ರವಿದ್ದರೆ ಅದು ಸಹಕಾರಿ ಕ್ಷೇತ್ರ. ಬೇರೆ ಯಾವ ಕ್ಷೇತ್ರದಿಂದಲೂ ಸಹಾಯವಾಗಲು ಸಾಧ್ಯವಿಲ್ಲ. ಹೊರ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆಗಳು ನಡೆಯುತ್ತವೆ. ಆದರೆ ಅವಿಭಜಿತ ಜಿಲ್ಲೆಯಲ್ಲಿ ಅಂತಹ ಘಟನೆಗಳು ನಡೆಯುವುದಿಲ್ಲ. ಇಲ್ಲಿನ ರೈತರ ಬೇಡಿಕೆಗಳನ್ನು ಪೂರೈಸುವ ಶಕ್ತಿ ಸಹಕಾರಿ ಸಂಘಗಳಿಗೆ ಇದೆ ಎಂದರು.

ಎಂ.ಎಂ. ಶ್ಯಾಮಲಾ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು, ರಾಜಪುರ ಸಾರಸ್ವತ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು, ರಾಘವ ನಾಯ್ಕ್, ಭಾಸ್ಕರ ಎಸ್. ಕೋಟ್ಯಾನ್, ಉದಯ ಎಸ್. ಕೋಟ್ಯಾನ್, ಪ್ರವೀಣ್ ಬಿ. ನಾಯಕ್, ಚಂದ್ರಪ್ರತಿಮಾ ಎಂ.ಜೆ., ಕೆ.ಪಿ. ಪದ್ಮಾವತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply