
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಜಾತ್ರೋತ್ಸವದ ಮುಂಚಿತವಾಗಿ ಕೆಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡು ಮುಗಿಸಲಾಗಿದೆ. ಜಾತ್ರೋತ್ಸವದ ಕೆಲಸ ಕಾರ್ಯಗಳೆಲ್ಲಾ ಪೂರ್ಣಗೊಂಡಿದೆ ಎಂದು ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮತ್ತು ಸುಳ್ಯದ ಶಾಸಕ ಎಸ್. ಅಂಗಾರ ಹೇಳಿದರು.
ಅವರು ಸುಬ್ರಹ್ಮಣ್ಯದಲ್ಲಿ ವಿ4 ನ್ಯೂಸ್ನೊಂದಿಗೆ ಮಾತನಾಡಿದರು. ಅಭಿವೃದ್ಧಿಗೆ ಸಂಬಂದಪಟ್ಟ ಕಾಮಗಾರಿಗಳು ಬಾಕಿ ಉಳಿದಿದೆ. ಆ ಕಾಮಗಾರಿಗಳನ್ನು ಪರಿಶೀಲನೆ ಮಾಡಿಕೊಂಡು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಿದ್ದೇವೆ . ದೇವಳದಲ್ಲಿ ಜಾತ್ರೋತ್ಸವದ ಸಂದರ್ಭದಲ್ಲಿ ಹೋಮ್ಗಾರ್ಡ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಅವಶ್ಯಕತೆ ಇತ್ತು. ಅದನ್ನು ದೇವಳದ ಆಡಳಿತಾಧಿಕಾರಿ ಮತ್ತು, ಇಲಾಖಾ ಅಧಿಕಾರಿಗಳು ಸರಿಪಡಿಸಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣದ ದೇವಳದ ಜಾತ್ರೆಗೆ ಸಂಬಂಧಪಟ್ಟ ಎಲ್ಲಾ ಕೆಲಸಗಳು ನಡೆದಿದೆ. ಕೋವಿಡ್ ನಿಯಮ ಪಾಲಿಸಿಕೊಂಡು ಜಾತ್ರೋತ್ಸವನ್ನು ಸಾಂಪ್ರದಾಯಿಕವಾಗಿ ಆಚರಿಸಲಾಗುವುದು ಎಂದು ಹೇಳಿದರು.