Header Ads
Header Ads
Breaking News

ಕುದ್ಮಲ್ ರಂಗರಾವ್ ಪುರಭವನದಲ್ಲಿ ಸ್ವಾಸ್ಥ್ಯ ಸಂಕಲ್ಪ ಉದ್ಘಾಟನೆ, ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಉದ್ಘಾಟನೆ ಹಾಗೂ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನ ಮಂಗಳೂರಲ್ಲಿ ಆಯೋಜನೆ ಮಾಡಲಾಗಿತ್ತು. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆದ ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ|ಮೋಹನ್ ಆಳ್ವ ಅವರು ಉದ್ಘಾಟಿಸಿದ್ರು. ಈ ವೇಳೆ ಮಾತನಾಡಿದ ಅವರು, ಹಬ್ಬದ ದಿನದಂದು ಮಾದಕ ವಸ್ತುಗಳನ್ನು ಬಳಸದಂತೆ ನೋಡಿಕೊಳ್ಳಬೇಕು. ಮಾದಕ ವಸ್ತುಗಳ ವಿರುದ್ಧ ದೊಡ್ಡಮಟ್ಟಿನ ಆಂದೋಲನ ನಡೆಯಬೇಕು. ಆ ಮೂಲಕ ಜನತೆಯಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.ಇನ್ನು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಡ್ಲೂರ್ ಸತ್ಯನಾರಾಯಣಾಚಾರ್ಯ ಅವರು, ಮಾದಕ ವಸ್ತುಗಳ ಸೇವನೆ ಮತ್ತು ಪೂರೈಕೆ ಮಾಡುವ ಜನರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದರ ಪರಿಣಾಮವಾಗಿ ಅಮಾಯಕ ಯುವ ಜನತೆ ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ದುರಂತ ಅಂತಾ ಹೇಳಿದರು. 

ಈ ವೇಳೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪಿ.ಸುಬ್ರಮಣ್ಯ ಎಡಿಪಡಿತ್ತಾಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ಚೌಟ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ದಯಾನಂದ್ ಕತ್ತಲ್‌ಸಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *