Header Ads
Breaking News

ಕುರ್ನಾಡುವಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ : ರಾಜಾರಾಂ ಭಟ್ ಹೇಳಿಕೆ

ಉಳ್ಳಾಲ: ಪ್ರಧಾನಿಯ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಅನ್ನುವ ಮಾತು ಕುರ್ನಾಡು ಗ್ರಾಮ ಪಂಚಾಯಿತಿನಲ್ಲಿ ಸತ್ಯವಾಗಿದೆ. ಭ್ರಷ್ಟಾಚಾರ ರಹಿತ ಕೆಲಸವನ್ನು ಕುರ್ನಾಡು ಗ್ರಾ.ಪಂ ನಿರ್ವಹಿಸುವ ಮೂಲಕ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆಎಂದು ಅಮ್ಮೆಂಬಳ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಟಿ.ಜಿ ರಾಜಾರಾಂ ಭಟ್ ಅಭಿಪ್ರಾಯಪಟ್ಟರು.

ಅವರು ಕುರ್ನಾಡು ಗ್ರಾಮದ ಹೂವಿನಕೊಪ್ಪಲದಿಂದ ಕುರ್ನಾಡುಬೆಟ್ಟು ಸಂಪರ್ಕಿಸುವ ರಸ್ತೆಗೆ ರೂ.2.89 ಲಕ್ಷ ವೆಚ್ಚದಲ್ಲಿ ಪಂಚಾಯಿತಿನ ಸ್ವಂತ ನಿಧಿ 14 ನೇ ಹಣಕಾಸು ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಕಾಂಕ್ರೀಟಿಕರಣ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ ಜಿಲ್ಲಾ ಪಂಚಾಯಿತಿ ಉತ್ತಮ ಪಂಚಾಯಿತಿಯಾಗಿ ಕುರ್ನಾಡು ಗ್ರಾ.ಪಂ ಅನ್ನು ಆಯ್ಕೆ ಮಾಡಬೇಕಿದೆ. ಗ್ರಾಮದ ಬಹುತೇಕ ರಸ್ತೆಗಳು ಪೂರ್ಣಗೊಂಡಿರುವುದು ಇದಕ್ಕೆ ಪೂರಕ ಎಂದರು.

ಈ ಸಂದರ್ಭ ಬಿಜೆಪಿ ಕ್ಷೇತ್ರ ನಿಯೋಜಿತ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ತಾ.ಪಂ ಸದಸ್ಯ ನವೀನ್ ಪಾದಲ್ಪಾಡಿ, ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *