

ರಾಮಸೇನೆಯ ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷನೆಂದು ಹೇಳಿಕೊಂಡು ಬಂದಿದ್ದ ಪ್ರಸಾದ್ ಅತ್ತಾವರ ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ ಭಾರೀ ಪ್ರಮಾಣದ ಹಣ ಪಡೆದು ಮೋಸಗೈದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ.
ಮಂಗಳೂರು ಅಥವಾ ರಾಯಚೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವ ಆಮಿಷವೊಡ್ಡಿ 17.5 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದ ಬಗ್ಗೆ ಪ್ರಸಾದ ಅತ್ತಾವರ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೆÇಲೀಸರು ಆರೋಪಿಯನ್ನು ಬಂಧಿಸಿದ್ದಾರೆ.