Header Ads
Header Ads
Header Ads
Breaking News

ಕುಳಾಲು ನೆಕ್ಕರೆಕಾಡು ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ 5 ಕೋಟಿ ಅನುದಾನದಲ್ಲಿ ಸೇತುವೆ ಕಾಮಗಾರಿ ಕಾಮಗಾರಿಗೆ ಚಾಲನೆ ನೀಡಿದ ಸಚಿವ ರಮಾನಾಥ ರೈ

ವಿಟ್ಲದ ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಳಾಲು – ಕುದ್ರಿಯ ಭಾಗದ ಜನತೆಯ ಬಹುಕಾಲದ ಬೇಡಿಕೆಯಾದ ಕುಳಾಲು ನೆಕ್ಕರೆಕಾಡು ಸೇತುವೆಗೆ ಮಂಜೂರಾದ 5 ಕೋಟಿ ಅನುದಾನದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಸಚಿವರು ಇತರರು ಮಾಡಿದ ಅಭಿವೃದ್ಧಿ ಕೆಲಸಗಳನ್ನು ನನ್ನದು ಎಂದು ಹೇಳಲಿಲ್ಲ. ಕ್ಷೇತ್ರದ ಮತದಾರರಿಗೆ ಅಗೌರವ ಉಂಟುಮಾಡಲಿಲ್ಲ. ಸ್ವಚ್ಛ ಹಾಗೂ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಹೇಳಿದರು.

ಕೊಳ್ನಾಡು ಗ್ರಾ.ಪಂ.ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಎ.ಪಿ.ಎಂ.ಸಿ.ಅಧ್ಯಕ್ಷ ಪದ್ಮನಾಭ ರೈ ಮುಂತಾದವರು ಉಪಸ್ಥಿತರಿದ್ದರು.

ಮಹಮ್ಮದ್ ಆಲಿ, ವಿಟ್ಲ

Related posts

Leave a Reply