Header Ads
Breaking News

ಕೃಷಿಕರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ : ಉಡುಪಿ ಡಿಸಿ ಕಚೇರಿಗೆ ರೈತರ ಮುತ್ತಿಗೆ

 ಜಿಲ್ಲೆಯ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರಕಾರ, ಜನಪ್ರತಿನಿಧಿಗಳು ಹಾಗು ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಮನವಿಯನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಆಗಮಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಿದ ರೈತರು ಸರಕಾರ ಹಾಗು ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದ ರೈತರು ಅಲ್ಲೇ ಕೂತು ಧರಣಿ ನಡೆಸಿದರು. ಬಳಿಕ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಜಗದೀಶ್ ಅನುಮತಿ ಇಲ್ಲದೆ ಒಳ ನುಗ್ಗಿದ ರೈತರ ವಿರುದ್ಧ ಸಿಟ್ಟಾದ ಜಿಲ್ಲಾಧಿಕಾರಿ ಮನವಿ ಸ್ವೀಕರಿಸದೆ ಅಲ್ಲಿಂದ ತೆರಳಿದರು. ಇದರಿಂದ ಮತ್ತ? ಕುಪಿತಗೊಂಡ ರೈತರು ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಡಿಸಿದರು. ಬಳಿಕ ಪೊಲೀಸರು ಪ್ರತಿಭಟನಾಕಾರನ್ನು ಹೊರಗೆ ಕಳುಹಿಸಿದರು.

Related posts

Leave a Reply

Your email address will not be published. Required fields are marked *