Header Ads
Header Ads
Breaking News

ಕೃಷ್ಣನ ನಾಡಿನಲ್ಲಿ ಕೃಷ್ಣಜನ್ಮಾಷ್ಠಮಿ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಚಾಲನೆ

ಇದೇ ತಿಂಗಳ ಇಪ್ಪತ್ತ ಮೂರು ಮತ್ತು ಇಪ್ಪತ್ತ ನಾಲ್ಕರಂದು ಕೃಷ್ಣನ ನಾಡು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಳ್ಳಲಿದೆ. ಈ ಪ್ರಯುಕ್ತ ಹತ್ತು ದಿನಗಳ ಕಾಲ ಮಠ, ರಥಬೀದಿ ಮತ್ತು ರಾಜಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಚಾಲನೆ ನೀಡಿದ್ರು. ಕೃಷ್ಣಮಠದ ರಾಜಾಂಗಣದಲ್ಲಿ ಈ ಕಾರ್ಯಕ್ರಮವನ್ನು ಪರ್ಯಾಯ ಪಲಿಮಾರು ಮಠ, ಕೃಷ್ಣ ಮಠದ ಆಶ್ರಯದಲ್ಲಿ ಆಯೋಜಿಸಲಾಗಿತ್ತು.. ಪರ್ಯಾಯ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ಈ ಕಾರ್ಯಕ್ರಮಗಳು ನಡೆಯಲಿದ್ದು, ಆ ಎಲ್ಲ ಕಾರ್ಯಕ್ರಮಗಳಿಗೆ ಅಧಿಕೃತವಾಗಿ ಮಾಜಿ ಸಿಎಂ ಕುಮಾರಸ್ವಾಮಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ರು.

ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಕೃಷ್ಣನನ್ನು ತಮ್ಮ ಮಕ್ಕಳಲ್ಲಿ ಕೃಷ್ಣ ವೇಷ ಹಾಕುವ ಮೂಲಕ ಪಾಲಕರು ಕಾಣುತ್ತಾರೆ. ಕೃಷ್ಣ ಸಂದೇಶ ಇಂದಿಗೂ ಪ್ರಸ್ತುತ. ಕೃಷ್ಣ ಮಠದ ಕ್ಕೆ ತನ್ನ ಅಧಿಕಾರದ ಅವಧಿಯಲ್ಲಿ ಮೂರು ಕೋಟಿ ಮಂಜೂರು ಮಾಡಿರುವುದಾಗಿ ತಿಳಿಸಿದರು. ಕಾರ್ಯಕ್ರಮದ ಪರ್ಯಾಯ ಮಠಾದೀಶ ವಿದ್ಯಾಧೀಶತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಅದರಮಾರು ಮಠದ ಕಿರಿಯ ಶ್ರೀ ಈಶಪ್ರೀಯ ತೀರ್ಥ ಶ್ರೀಪಾದರು, ಪಲಿಮಾರು ಮಠದ ಕಿರಿಯ ಶ್ರೀ ವಿದ್ಯಾ ರಾಜೇಶ್ವರ ತೀರ್ಥ ಶ್ರೀಪಾದರು, ಮಾಜಿ ಸಚಿವ ಸಾ.ರಾ ಮಹೇಶ್ ,ಎಂ.ಎಲ್.ಸಿ ಭೋಜೇಗೌಡ , ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಶಾಸಕ ರಘುಪತಿಭಟ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *