Header Ads
Breaking News

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಪ್ರತಿಜ್ಞಾ ಸ್ವೀಕಾರ ಹಿನ್ನೆಲೆ : ಮಂಗಳೂರಿನ ಕಾಂಗ್ರೆಸ್ ಭವನದಲ್ಲೂ ಪದಗ್ರಹಣ ವೀಕ್ಷಣೆಗೆ ವ್ಯವಸ್ಥೆ

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ನೇರಪ್ರಸಾರ ಕಾರ್ಯಕ್ರಮ ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಪದಗ್ರಹಣೆಗೆ ವೀಕ್ಷಣೆಗೆ ಎಲ್ಲಾ ವ್ಯವಸ್ಥೆಗಳನ್ನು ಕೂಡಾ ಮಾಡಲಾಗಿತ್ತು. ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ವೀಕ್ಷಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ ಪದಗ್ರಹಣ ಕಾರ್ಯಕ್ರಮಕ್ಕೆ ದ.ಕ ಜಿಲ್ಲೆಯಲ್ಲು 329ಕಡೆಗಳಲ್ಲಿ ಏಕಕಾಲದಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಲ್ಲರೂ ಈ ಕಾರ್ಯಕ್ರಮಕ್ಕೆ ಭಾಗವಹಿಸಿದ್ದಕ್ಕಾಗಿ ಧನ್ಯವಾದ ಸಮರ್ಪಿಸಿದ್ರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಜೆ.ಆರ್ ಲೋಬೋ, ಮಾಜಿ ಮೇಯರ್ ಕವಿತಾ ಸನಿಲ್, ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಇನ್ನು ದ,ಕ ಜಿಲ್ಲೆಯ ಹಲವೆಡೆ ಪದಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.. ಕೆಪಿಸಿಸ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಲು ಪುತ್ತೂರಿನ ಕೂರ್ನಡ್ಕದಲ್ಲಿ ವ್ಯವಸ್ಥೆಯನ್ನು ಮಾಡಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಿದರು.

Related posts

Leave a Reply

Your email address will not be published. Required fields are marked *