Header Ads
Header Ads
Breaking News

ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಹಿನ್ನೆಲೆ:ಜನವರಿ 8ಮತ್ತು 9 ಎರಡು ದಿನ ಮುಷ್ಕರಕ್ಕೆ ಕರೆ

ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ ಕೊಟ್ಟಿದೆ.

ಎಐಟಿಸಿ, ಐಎನ್‌ಟಿಯುಸಿ, ಸಿಐಟಿಯು ಸೇರಿದಂತೆ ಅಖಿಲ ಭಾರತ ಕಾರ್ಮಿಕ ಸಂಘಟನೆಗಳು ಕರೆಕೊಟ್ಟ ಬಂದ್ ಗೆ ಸಾರಿಗೆ ಒಕ್ಕೂಟಗಳು ಬೆಂಬಲ ನೀಡಿದ್ದು, ಈ ಹಿನ್ನಲೆಯಲ್ಲಿ ಬಿಎಂಟಿಸಿ, ಕೆಎಸ್‌ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್‌ಗಳ ಓಡಾಟ ಇರಲ್ಲ. ಒಟ್ಟು 26 ಸಾವಿರ ನಾಲ್ಕು ನಿಗಮದ ಬಸ್ ಸ್ತಬ್ಧವಾಗಲಿದೆ. ಅಂತೆಯೇ ಬಂದ್‌ಗೆ ಎಆರ್ ಡಿಯು ಆಟೋ ಸಂಘಟನೆ ಬೆಂಬಲ ನೀಡಿದ್ದರಿಂದ ಬಹುತೇಕ ಆಟೋ ಸಂಚಾರ ಅನುಮಾನ. ಟ್ಯಾಕ್ಸಿ ಮಾಲೀಕರ ಸಂಘ ಕೂಡ ನೈತಿಕ ಬೆಂಬಲ ಕೊಟ್ಟಿದೆಯಾದರೂ ಟ್ಯಾಕ್ಸಿ ಸೇವೆಯಲ್ಲಿ ಗಮನಾರ್ಹ ವ್ಯತ್ಯಯ ಕಂಡುಬರುವುದಿಲ್ಲ.
ಇನ್ನು ಅಂಗನವಾಡಿ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿದ್ದು ಅಂಗನವಾಡಿಗಳು ಬಂದ್ ಆಗಲಿವೆ. ಬ್ಯಾಂಕ್ ನೌಕರರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಲಕ್ಷಾಂತರ ಮಂದಿ ಗಾರ್ಮೆಂಟ್ಸ್ ನೌಕರರು ಬಂದ್‌ನಲ್ಲಿ ಭಾಗವಹಿಸುತ್ತಿರುವುದರಿಂದ ಎಲ್ಲಾ ಫ್ಯಾಕ್ಟರಿಗಳು, ಗಾರ್ಮೆಂಟ್ಸ್ ಗಳು ಅಘೋಶಿತ ರಜೆ ನೀಡುವ ಸಾದ್ಯತೆ ಇದೆ.ಇನ್ನು ಸಾರಿಗೆ ಒಕ್ಕೂಟವೇ ಬಂದ್ ಗೆ ಕರೆ ನೀಡಿರುವುದರಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಖಾಸಗಿ ಬಸ್‌ಗಳ ಸಂಚಾರ ಕೂಡ ಸ್ಥಗಿತವಾಗಲಿದೆ. ಸರ್ಕಾರಿ ನೌಕರರು, ಚಿತ್ರೋದ್ಯಮದ ಮಂದಿ, ಬೀದಿ ಬದಿ ವ್ಯಾಪಾರಿಗಳು, ಎಪಿಎಂಸಿ ಬಂದ್ ಗೆ ನೈತಿಕ ಬೆಂಬಲ ಘೋಷಿಸಿದ್ದಾರೆ. ಓಲಾ, ಉಬರ್ ಬಂದ್ ಗೆ ನೈತಿಕ ಬೆಂಬಲ ನೀಡಿವೆ.

Related posts

Leave a Reply