Header Ads
Breaking News

ಕೇಂದ್ರದ ಮಹಿಳಾ ಪರ ಯೋಜನೆಗಳಿಂದ ಮಹಿಳೆಯರಲ್ಲಿ ಭದ್ರತಾ ಭಾವನೆ : ಸುಲೋಚನಾ ಜಿ.ಕೆ. ಭಟ್

ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದ ಮಹಿಳಾ ಪರ ಯೋಜನೆಗಳಿಂದ ದೇಶದ ಮಹಿಳೆಯರಲ್ಲಿ ಭದ್ರತಾ ಭಾವನೆ ಮೂಡಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಸಹ ವಕ್ತಾರೆ ಸುಲೋಚನ ಜಿ.ಕೆ ಭಟ್ ಹೇಳಿದರು.

ಅವರು ಮಂಗಳೂರಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮಹಿಳಾ ಮೋರ್ಚಾ ಕಾರ್ಯಕರ್ತರು ಅಭಿಮಾನದಿಂದ ಕೆಲಸ ಮಾಡುತ್ತಿದ್ದಾರೆ ಎಂದರು.
ಆರುವತ್ತು ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರ ಪ್ರಗತಿ ಆದ್ಯತೆಯಾಗಿರಲಿಲ್ಲ.ದೇಶದ ಇತಿಹಾಸದಲ್ಲೇ ರಕ್ಷಣಾ ಖಾತೆ ಹಾಗೂ ವಿದೇಶಾಂಗ ಖಾತೆಯಂತಹ ಎರಡು ಮಹತ್ವದ ಜವಾಬ್ದಾರಿಗಳನ್ನು ಮೋದಿ ಸರ್ಕಾರ ಮಹಿಳೆಯರಿಗೆ ನೀಡಿದೆ ಎಂದರು.
ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಮೂಲಕ ಹೆಣ್ಣು ಭ್ರೂಣಹತ್ಯೆ ತಡೆ ಮತ್ತು ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ ಅವರು, ಮಂಗಳೂರಿನ ಮೋದಿ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನಿಂದ ಹತಾಶೆಗೊಂಡಿರುವ ಕಾಂಗ್ರೆಸ್ ಮಹಿಳಾ ಮುಖಂಡರು ಮಹಿಳಾ ಮೋರ್ಚಾದ ಮಾತೆಯರ ಮೇಲೆ ದಾಳಿ ನಡೆಸುವ ದುಸ್ಸಾಹಕ್ಕೆ ಮುಂದಾಗಿದ್ದಾರೆ ಎಂದು ಸುಲೋಚನಾ ಭಟ್ ಆರೋಪಿಸಿದರು.

ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪೂಜಾ ಪೈ,ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ರೂಪಾ ಡಿ ಬಂಗೇರಾ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *