Header Ads
Header Ads
Breaking News

ಕೇಂದ್ರದ ಮೋದಿ ಸರ್ಕಾರದಿಂದ ಜನತೆಗೆ ಕೇವಲ ಭರವಸೆ ಮಾತ್ರ : ಎಂ.ಬಿ. ಪಾಟೀಲ್ ಹೇಳಿಕೆ

ಕೇಂದ್ರದ ಮೋದಿಯವರು ಪ್ರಚಾರ ಮಾಡಿ ಜನರಲ್ಲಿ ಕನಸನ್ನು ಬಿತ್ತಿದರು. ಆದರೆ ಇದುವರೆಗೆ ಯಾವುದೇ ರೀತಿಯಲ್ಲಿ ಕನಸನ್ನು ನನಸು ಮಾಡಿಲ್ಲ, ಯುವಕರಿಗೆ ಉದ್ಯೋಗವನ್ನು ಸೃಷ್ಟಿ ಮಾಡುವುದಾಗಿ ಹೇಳಿ ಮೋಸ ಮಾಡಿದ್ದಾರೆ ಎಂದು ಗೃಹಸಚಿವ ಎಂ.ಬಿ. ಪಾಟೀಲ್ ಹೇಳಿದರು. ಅವರು ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜನರಲ್ಲಿ ದೊಡ್ಡ ದೊಡ್ಡ ಕನಸುಗಳನ್ನು ಬಿತ್ತಿದ್ದಾರೆ.

ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಹಾಕುವುದಾಗಿ ಹೇಳಿದರು. ಆದರೆ ಅಧಿಕಾರಕ್ಕೆ ಬಂದು ವರ್ಷ ಐದು ಆದರೂ ಸಾಧ್ಯವಾಗಿಲ್ಲ ಎಂದು ಹೇಳಿದರು.

Related posts

Leave a Reply