Header Ads
Header Ads
Breaking News

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಂದ ಮತ ಚಲಾವಣೆ. ಹಾರಾಡಿ ಸರಕಾರಿ ಶಾಲೆಯಲ್ಲಿ ಮತ ಚಲಾಯಿಸಿದ ಡಿ.ವಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ. ಹೆಚ್ಚಿನ ಕಡೆಯಲ್ಲಿ ಗೆಲುವು ಸಾಧಿಸಲಿದೆ. ಪುತ್ತೂರಿನಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿಕೆ.

ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ಪುತ್ತೂರಿನ ಹಾರಡಿ ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ. ಹೆಚ್ಚಿನ ಕಡೆಯಲ್ಲಿ ಗೆಲುವು ಸಾಧಿಸಲಿದೆ ಎಂದರು. ಭೀಮಾ ಗೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದವರು ದೇಶದ ಭದ್ರತೆಗೆ ಕಂಟಕ. ನರೇಂದ್ರ ಮೋದಿ ಸರಕಾರ ದೇಶದ ಭದ್ರತೆಯ ದೃಷ್ಟಿಯಿಂದ ಕಠಿಣ ಕ್ರಮ ಜರುಗಿಸಲಿದೆ. ಪ್ರತಿಪಕ್ಷಗಳಿಗೆ ಬೇರೆ ವಿಚಾರವಿಲ್ಲದ ಕಾರಣ ಇದನ್ನೇ ದೊಡ್ಡ ವಿಷಯವನ್ನಾಗಿ ಮಾಡುತ್ತಿದೆ ಎಂದರು.ಶೀರಾಡಿ ಘಾಟ್ ರಸ್ತೆ ವಾಹನ ಸಂಚಾರಕ್ಕೆ ಶೀಘ್ರ ತೆರೆಯಬೇಕು. ಈ ಸಂಬಂಧ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಜೊತೆ ಮಾತನಾಡಿದ್ದೇನೆ. ಘಾಟ್ ರಸ್ತೆಯನ್ನು ೬ ತಿಂಗಳು ಬಂದ್ ಮಾಡುವ ಸಹಮತವಿಲ್ಲ ಎಂದು ಹೇಳಿದರು.

Related posts

Leave a Reply