Header Ads
Breaking News

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಖಂಡನೆ : ಮಾ.26ರಂದು ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನಾ ಸಭೆ

ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಿರೋಧಿಸಿ ಮಾ.26ರಂದು ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದರು.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಹೋರಾಟ ಮಾ.26ಕ್ಕೆ ನಾಲ್ಕು ತಿಂಗಳು ಪೂರೈಸುತ್ತಿದೆ. ಆ ದಿನ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿದ್ದು ಇದರ ಪ್ರಯುಕ್ತ ದಕ್ಷಿಣ ಕನ್ನಡ ರೈತ, ದಲಿತ, ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದಿಂದ ಬಿ.ಸಿ.ರೋಡಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಯಾದವ ಶೆಟ್ಟಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಪ್ರೇಮನಾಥ ಶೆಟ್ಟಿ ಬಾಳ್ತಿಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *