
ಕೇಂದ್ರ ಸರ್ಕಾರಿ ನೌಕರರಿಗೆ ನೀಡುತ್ತಿರುವ ಮಾದರಿಯಲ್ಲಿ 7ನೇ ವೇತನ ಆಯೋಗದ ವರದಿಗಳನ್ನು ಜಾರಿಗೊಳಿಸುವ ಮೂಲಕ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸರಿಸಮಾನ ವೇತನ ನೀಡಲು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ ಅಂತಾ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ರು. ಅವರು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ್ರು, ನೂತನ ಪಿಂಚಣಿ ಯೋಜನೆಯನ್ನು ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಸಂಘವು ಒತ್ತಾಯಿಸಿದೆ. ಜೊತೆಗೆ ಸರ್ಕಾರಿ ನೌಕರರ ಸಮಸ್ಯೆ ಪರಿಹರಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇನ್ನೂ ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಸಂಘವು ಒತ್ತಾಯ ಮಾಡಿದೆ ಎಂದು ಅವರು ಹೇಳಿದರು. ಈ ವೇಳೆ ಜಿಲ್ಲಾಧ್ಯಕ್ಷ ಪಿ.ಕೆ. ಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.