Header Ads
Header Ads
Breaking News

ಕೇಪುವಿನ ಕಲ್ಲಂಗಳದಲ್ಲಿ ನಿರ್ಮಾಣಗೊಂಡ ಕ್ರೀಡಾಂಗಣ

ವಿಟ್ಲ: ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ ಹಾಗೂ ಕೇಪುವಿನ ಕಲ್ಲಂಗಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಕ್ರೀಡಾಂಗಣ ಉದ್ಘಾಟನಾ ಸಮಾರಂಭದ ವಿಟ್ಲದ ಕೇಪು ಕಲ್ಲಂಗಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಪಂಚಾಯತ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಹಾಗೂ ಕೇಪು ಕಲ್ಲಂಗಳ ಸರಕಾರಿ ಪ್ರೌಢ ಶಾಲೆಯ ವತಿಯಿಂದ ಈ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭ ಮಾತನಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಗ್ರಾಮೀಣ ಮಟ್ಟದಲ್ಲಿ ಸಾಕಷ್ಟು ಕ್ರೀಡಾ ಪ್ರತಿಭೆಗಳಿದ್ದು ದೈಹಿಕವಾಗಿ ಸಾಮರ್ಥ್ಯ ಹೊಂದಿದ್ದಾರೆ. ಈ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ಮಿಂಚಬೇಕಾಗಿದ್ದು, ಇವರನ್ನು ತರಬೇತುಗೊಳಿಸುವ ಜವಾಬ್ದಾರಿ ದೈಹಿಕ ಶಿಕ್ಷಕರ ಮೇಲಿದೆ ಎಂದು ಹೇಳಿದರು.

ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕ್ರೀಡಾಂಗಣ ಉದ್ಘಾಟಿಸಿದರು.  ಜಿಪಂ ಸದಸ್ಯ ಎಂ.ಎಸ್. ಮುಹಮ್ಮದ್ ಕ್ರೀಡಾಜ್ಯೋತಿ ಸ್ವೀಕರಿಸಿದರು. ಕ್ರೀಡಾಕೂಟವನ್ನು ಜಿ.ಪಂ ಸದಸ್ಯೆ ಜಯಶ್ರೀ ಕೋಡಂದೂರು ಉದ್ಘಾಟಿಸಿದರು. ಕೇಪು ಗ್ರಾಪಂ ಅಧ್ಯಕ್ಷ ತಾರಾನಾಥ ಆಳ್ವ ಗೌರವ ರಕ್ಷೆ ಸ್ವೀಕರಿಸಿದರು. ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಂಗಳೂರು ಉಪ ನಿರ್ದೇಶಕ ವೈ.ಶಿವರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಎರಡು ದಿನಗಳ ಕಾಲ ಈ ಕ್ರೀಡಾಕೂಟ ನಡೆಯಲಿದೆ. ಬಂಟ್ವಾಳ ತಾಲ್ಲೂಕಿನ ವಿವಿಧ ಶಾಲೆಗಳಿಂದ 800ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು, 250 ಅಧ್ಯಾಪಕರು ಭಾಗವಹಿಸಿದ್ದರು.

ಈ ಸಂದರ್ಭ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾ ಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯೆ ಕವಿತಾ ಸುಬ್ಬನಾಯ್ಕ, ಕೇಪು ಗ್ರಾಪಂ ಉಪಾಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ, ಅಳಿಕೆ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನ ಕಾರ್ಯದರ್ಶಿ ಚಂದ್ರಶೇಖರ್ ಭಟ್, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ತಾಲ್ಲೂಕು ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಚೆಲ್ಲಡ್ಕ, ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಬಾಲಚಂದ್ರ ಕಟ್ಟೆ, ಶಾಲಾ ಮುಖ್ಯ ಶಿಕ್ಷಕಿ ಮಾಲತಿ, ಕೂಟದ ಆರ್ಥಿಕ ಸಮಿತಿ ಅಧ್ಯಕ್ಷ ರಾಜೀವ ಭಂಡಾರಿ, ದೈಹಿಕ ಶಿಕ್ಷಣ, ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ ಕೆ., ಬಾಲಕೃಷ್ಣ ಕಾರಂತ ಎರುಂಬು, ಪುಸ್ಪಾಕರ ರೈ, ಜಿನಚಂದ್ರ, ಅಬ್ದುಲ್ ಕರೀಂ ಕುದ್ದುಪದವು, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರತ್ನಾವತಿ, ಉಪನ್ಯಾಸಕ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *