Header Ads
Header Ads
Breaking News

ಕೇರಳ, ಕರ್ನಾಟಕಕ್ಕೆ ಸಹಾಯ ಹಸ್ತ ಚಾಚಿದ ಕತಾರ್‌ನ ಭಾರತೀಯರು

ಭಾರತೀಯ ದೂತಾವಾಸದಡಿಯಲ್ಲಿ ಕಾರ್ಯವಹಿಸುತ್ತಿರುವ ಭಾರತೀಯ ಸಮುದಾಯದ ಸೇವಾ ಸಂಸ್ಥೆಯ ಅಡಿಯಲ್ಲಿ ಪ್ರವಾಹ ಪೀಡಿತ ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯ ಪ್ರವಾಹ ಪೀಡಿತರಿಗೆ ಧನ ಸಂಗ್ರಹಣೆ ಮಾಡಿ ದೇಣಿಗೆ ನೀಡುವ ಮೂಲಕ ಕತಾರ್ ದೇಶದಲ್ಲಿರುವ ಭಾರತದ ರಾಜ್ಯಗಳ ಸಂಘ ಸಂಸ್ಥೆಗಳು ಹೃದಯವಂತಿಕೆ ಮೆರೆದಿದ್ದಾರೆ.

ಭಾರತೀಯ ರಾಯಭಾರಿಯಾದ ಶ್ರೀ ಪಿ.ಕುಮರನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಒಂದು ಅಭಿಯಾನಕ್ಕೆ ಭಾರತದ ನಾಗರೀಕರೆಲ್ಲ ಉದಾರವಾಗಿ ಸಹಾಯ ಹಸ್ತ ಚಾಚಿದ್ದಾರೆ. ಇದೆ ತಿಂಗಳ 24ನೇ ತಾರೀಖಿನಂದು ಕತಾರ್ ದೇಶದಿಂದ ಆಗಮಿಸಿದ್ದ ಪ್ರತಿನಿಧಿಗಳಾದ ICBF ಕಾರ್ಯದರ್ಶಿಯಾದ ಶ್ರೀ ಮಹೇಶಗೌಡ ಅವರ ಮುಂದಾಳತ್ವದಲ್ಲಿ ಅವರ ಜೊತೆಯಾಗಿ ಶ್ರೀಮತಿ ಮಿಲನ್ ಅರುಣ್ , ಅಧ್ಯಕ್ಷರು ಭಾರತೀಯ ಸಾಂಸ್ಕೃತಿಕ ಸಂಸ್ಥೆ,  ICBF  ಮತ್ತು ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರೂ ಆದ ಶ್ರೀ ಅರವಿಂದ್ ಪಾಟೀಲ್,ಕರ್ನಾಟಕ ಸಂಘದ ಉಪಾಧ್ಯಕ್ಷರಾದ ಶ್ರೀ ರವಿ ಶೆಟ್ಟಿ ಹಾಗೂ ಕರ್ನಾಟಕ ಸಂಘ ಕತಾರ್ ಮಾಜಿ ಉಪಾಧ್ಯಕ್ಷರೂ ಹಾಗೂ ಕತಾರ್ ದಲ್ಲಿ ಕನ್ನಡ ಚಲನಚಿತ್ರಗಳ ವಿತರಕರಾದ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಇವರೆಲ್ಲರೂ ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹದಿನೈದು ಲಕ್ಷ ರೂಪಾಯಿಗಳ ಚೆಕ್ಕನ್ನು ಕರ್ನಾಟಕದ ಮುಖ್ಯಮಂತ್ರಿ ಸನ್ಮಾನ್ಯ ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸಿದರು.

ದೇಣಿಗೆಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು ಕತಾರ್ ಭಾರತೀಯರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತ ಶ್ಲಾಘಿಸಿದರು. ಅಲ್ಲದೆ ಕರ್ನಾಟಕದಲ್ಲಿ ಆದ ಮೂರು ದುರ್ಘಟನೆಗಳ ಕಾರಣದಿಂದಾಗಿ ನಿಗದಿತ ಸಮಯದಲ್ಲಿ ಭೇಟಿಯಾಗಲು ಸಾಧ್ಯವಾಗದಕ್ಕೆ ವಿಷಾದ ವ್ಯಕ್ತಪಡಿಸಿದರು. ಕತಾರ್ ಪ್ರತಿನಿಧಿಗಳು ಮಾಜಿ ಸಚೀವ ಹಾಗೂ ಜನಪ್ರಿಯ ನಟ ಶ್ರೀ ಅಂಬರೀಷ್ ಅವರ ಅಕಾಲಿಕ ಮರಣ , ಬಸ್ ದುರ್ಘಟನೆ ಮತ್ತು ಹಿರಿಯ ನಾಯಕ ಶ್ರೀ ಜಾಫರ್ ಷರೀಫ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದರು.

Related posts

Leave a Reply