Header Ads
Breaking News

ಕೇರಳ ರಾಜ್ಯಕ್ಕೆ ಅಲ್ಪ ಸಮಧಾನ! ಹೊಸ ಪ್ರಕರಣಗಳಿಲ್ಲ-ನಾಲ್ವರು ಗುಣಮುಖ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ವೈರಸ್ ಸೋಂಕಿನ ಹೊಸ ಪ್ರಕರಣ ಇಲ್ಲ. ಅದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಗುಣಮುಖರಾಗಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 179 ಮಂದಿಗೆ ರೋಗ ಬಾಧಿಸಿದ್ದು, 171 ಮಂದಿ ಗುಣಮುಖ ರಾಗಿದ್ದಾರೆ. 8 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕೇರಳ ರಾಜ್ಯದಲ್ಲಿ ಶುಕ್ರವಾರ ಕೊರೊನಾ ವೈರಸ್ ಸೋಂಕಿನ ಹೊಸ ಪ್ರಕರಣ ದಾಖಲಾಗಿಲ್ಲ. ಅದೇ ವೇಳೆ ಒಟ್ಟು 9 ಮಂದಿ ಗುಣಮುಖರಾಗಿದ್ದಾರೆ. ಕಳೆದ 55 ದಿನಗಳ ಬಳಿಕ ಮೊದಲ ಬಾರಿಗೆ ಕೊರೊನಾ ವೈರಸ್ ಸೋಂಕು ಬಾಧಿಸದ ದಿನವಾಗಿದ್ದು, ಸಮಾಧಾನ ಪಡುವಂತಾಗಿದೆ. ಶುಕ್ರವಾರ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯಲ್ಲಿ ತಲಾ ನಾಲ್ವರು ಗುಣಮುಖರಾಗಿದ್ದಾರೆ. ಎರ್ನಾಕುಳಂನಲ್ಲಿ ಒಬ್ಬರು ಗುಣಮುಖರಾಗಿದ್ದಾರೆ.

Related posts

Leave a Reply

Your email address will not be published. Required fields are marked *