Header Ads
Header Ads
Header Ads
Breaking News

ಕೊಡಂಗೆ ಸರ್ಕಾರಿ ವಸತಿಗೃಹ ಪರ್ಲಿಯ ರಸ್ತೆ 50 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಳ್ಳಲಿರುವ ರಸ್ತೆ ಸಚಿವ ರಮಾನಾಥ ರೈರಿಂದ ಶಿಲಾನ್ಯಾಸ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಕೊಡಂಗೆ ಸರಕಾರಿ ವಸತಿ ಗೃಹ ಪರ್ಲಿಯ ರಸ್ತೆ ಲೋಕೋಪಯೋಗಿ ಇಲಾಖೆ ವತಿಯಿಂದ 50 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಳ್ಳಲಿದ್ದು, ಈ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಮುಂದಿನ ತಿಂಗಳ ಮೊದಲ ವಾರದಲ್ಲಿ ರಾಜ್ಯ ಮುಖ್ಯಮಂತ್ರಿ ಬಂಟ್ವಾಳಕ್ಕೆ ಭೇಟಿ ನೀಡಿಲಿದ್ದು ವಿವಿಧ ಕಟ್ಟಡ ಕಾಮಾಗರಿಗಳನ್ನು ಉದ್ಘಾಟನೆಗೊಳಿಸಲಿದ್ದಾರೆ ಮತ್ತು ಇನ್ನಷ್ಟು ಅಭಿವೃದ್ದಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದರು. ಕೈಕಂಬದಲ್ಲಿ ಹೆದ್ದಾರಿಯ ಅವ್ಯವಸ್ಥೆಯ ಬಗ್ಗೆ ಪ್ರತಿಭಟನೆ ನಡೆಸಿದ್ದರು. ಅದು ನನ್ನ ಪ್ಯಾಪ್ತಿಗೆ ಬರುತ್ತಿದದ್ರೆ ಯಾವತ್ತೋ ಕಾಮಗಾರಿ ನಡೆಸುತಿದ್ದೆ. ಆದರೆ ತಿಳುವಳಿಕೆಯ ಕೊರತೆ ಇದ್ದವರು ನನ್ನ ವಿರುದ್ದ ಘೋಷಣೆ ಕೂಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಗೇರು‌ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಹೆಚ್.ಖಾದರ್, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಶಾಹುಲ್ ಹಮೀದ್, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ,ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪ್ರಮುಖರಾದ ಲುಕ್ ಮಾನ್, ಇದಿನಬ್ಬ, ಯಾಸ್ಮಿನ್,ಲೋಕೋಪಯೋಗಿ ಇಂಜಿನಿಯರ್ ಉಮೇಶ್ ಭಟ್, ವಾಸುಶೆಟ್ಟಿ, ಮುಖ್ಯಾಧಿಕಾರಿ ರೇಖಾಶೆಟ್ಟಿ, ಕಾಮಗಾರಿ ಗುತ್ತಿಗೆದಾರ ಧೀರಜ್ ನಾಯಕ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವರದಿ: ಸಂದೀಪ್ ಬಂಟ್ವಾಳ

Related posts

Leave a Reply