Header Ads
Header Ads
Breaking News

ಕೊಡಕಲ್‌ನಲ್ಲಿ ಆವರಣಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳ ದುರ್ಮರಣ : ಶಾಸಕ ವೇದವ್ಯಾಸ ಕಾಮತ್‌ರಿಂದ 5ಲಕ್ಷ ರೂ. ಚೆಕ್ ವಿತರಣೆ

ನಿರಂತರ ಮಳೆಗೆ ಕಾಂಪೌಂಡ್ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಮಂಗಳೂರಿನ ಶಿವನಗರ ಕೊಡಕಲ್‌ನಲ್ಲಿ ನಡೆದಿದೆ. ಪರೀಕ್ಷೆಯ ಸಿದ್ಧತೆಗಾಗಿ ಮನೆಯ ಸಮೀಪ ಓದುತ್ತಿದ್ದ ಸಂದರ್ಭ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಮಕ್ಕಳಿಬ್ಬರೂ ಮಣ್ಣಿನ ಕೆಳಗೆ ಸಿಲುಕಿಕೊಂಡಿದ್ರು. ತಕ್ಷಣವೇ ಗೋಡೆಯ ಅವಶೇಷಗಳಡಿ ಸಿಲುಕಿದ್ದ ಮಕ್ಕಳನ್ನು ತಂದೆ-ತಾಯಿ ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಾಗಲೇ ಮಕ್ಕಳು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಹಾಗೂ ಕಂಕನಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ತೀವಿ ಎಂದು ಪೊಲೀಸ್ ಕಮಿಷನರ್ ಹೇಳಿಕೆ ನೀಡಿದ್ದಾರೆ. ಇನ್ನು ಈ ಕುಟುಂಬಕ್ಕೆ ಜಿಲ್ಲಾಡಳಿತ ವತಿಯಿಂದ ತಲಾ ರೂ.5 ಲಕ್ಷ ರೂ. ಚೆಕ್ಕನ್ನು ಶಾಸಕ ವೇದವ್ಯಾಸ ಕಾಮತ್ ವಿತರಿಸಿದರು. ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *