Header Ads
Breaking News

ಕೊಡಾಜೆಯಲ್ಲಿ ಭೀಕರ ರಸ್ತೆ ಅಪಘಾತ : ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ವಿಟ್ಲ: ಕಾರು ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ತಿರುವಿನಲ್ಲಿ ನಡೆದಿದೆ.

ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಕೊಡಾಜೆ ಕಡೆಯಿಂದ ಮಾಣಿ ಕಡೆಗೆ ಆಟೋ ರಿಕ್ಷಾ ನಡುವೆ ಈ ಅಪಘಾತ ಸಂಭವಿಸಿದೆ. ಕೊಡಾಜೆ ಪಂತ್ತಡ್ಕ ನಿವಾಸಿ ಅಮ್ಮಿ ಮೃತಪಟ್ಟ ಆಟೋ ರಿಕ್ಷಾ ಚಾಲಕ. ರಿಕ್ಷಾದಲ್ಲಿದಲ್ಲಿ ಪ್ರಯಾಣಿಸುತ್ತಿದ್ದ ಚಾಲಕನ ಪತ್ನಿಯ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಕಾರಿನ ಮೇಲೆ ಉರುಳಿ ಬಿದ್ದಿದೆ. ಎರಡು ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

Related posts

Leave a Reply

Your email address will not be published. Required fields are marked *