Header Ads
Breaking News

ಕೊನೆಗೂ ಉದ್ಘಾಟನೆಗೊಂಡ ತೊಕ್ಕೊಟ್ಟು ಚತುಷ್ಪಥ ರಸ್ತೆ ಮೇಲ್ಸೇತುವೆ

ಉಳ್ಳಾಲ: ಹಲವು ಕಾರಣಗಳಿಂದ ವರ್ಷಗಳ ಕಾಲ ನನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ೬೬ರ ಮಂಗಳೂರು-ಕಾಸರಗೋಡು ನಡುವಿನ ತೊಕ್ಕೊಟ್ಟು ಬಳಿ ನಿರ್ಮಾಣಗೊಂಡ ಚತುಷ್ಪಥ ರಸ್ತೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ಲೋಕಾರ್ಪಣೆಗೊಂಡಿತು.ನೂತನ ಫ್ಲೈಓವರ್ ಅನ್ನು ಸಂಸದ ನಳಿನ್ ಕುಮಾರ್ ಕಟೀಲು ಅವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಹಲವಾರು ವರ್ಷಗಳ ಮೇಲ್ಸೇತುವೆಯ ಕನಸು ಇದೀಗ ಉದ್ಘಾಟನೆಯ ಮೂಲಕ ನನಸಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಪ್ಲೈ ಓವರ್‌ಗೆ ಆರ್ಥಿಕ ಸಂಕಷ್ಟ ಎದುರಾಗಿದ್ದ ಕಾರಣ ಕಾಮಗಾರಿ ವಿಳಂಬವಾಗಿತ್ತು. ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಪಂಪುವೆಲ್ ಮೇಲ್ಸೇತುವೆ ಕಾಮಗಾರಿಯೂ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಬೋಳಿಯಾರ್, ಮಾಜಿ ಶಾಸಕ ಜಯರಾಮ ಶೆಟ್ಟಿ, ಮುಖಂಡರಾದ ಚಂದ್ರಹಾಸ್ ಉಚ್ಚಿಲ್, ಚಂದ್ರಹಾಸ್ ಉಳ್ಳಾಲ್, ಮನೋಜ್ ಆಚಾರ್ಯ, ಹರಿಯಪ್ಪ ಸಾಲಿಯಾನ್, ಸತೀಶ್ ಕುಂಪಲ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *