Header Ads
Breaking News

ಕೊನೆಗೂ ಪಂಪ್‍ವೆಲ್ ಫ್ಲೈ ಓವರ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ; ಜ.31ರಂದು ಫ್ಲೈ ಓವರ್ ಗೆ ಉದ್ಘಾಟನಾ ಭಾಗ್ಯ

ಹತ್ತು ವರ್ಷಗಳಿಗೂ ಹೆಚ್ಚು ಕಾಲ ಕುಂಟುತ್ತಾ ಸಾಗಿದ ಪಂಪ್‍ವೆಲ್ ಫ್ಲೈ ಓವರ್ ಕಾಮಗಾರಿ ಉದ್ಘಾಟನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜ.31ರಂದು ಬೆಳಗ್ಗೆ 9 ಗಂಟೆಗೆ ಸಮಯ ನಿಗದಿಯಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲು ಫ್ಲೈ ಓವರ್‍ನ್ನು ಉದ್ಘಾಟಿಸಲಿದ್ದಾರೆ.

ತಾಂತ್ರಿಕ ಕಾರಣಗಳು, ಗುತ್ತಿಗೆ ವಹಿಸಿಕೊಂಡ ಕಂಪನಿಯ ಆರ್ಥಿಕ ಮುಗ್ಗಟ್ಟು, ಜನಪ್ರತಿನಿಧಿಗಳ ಹಾಗೂ ಅಕಾರಿಗಳ ನಿರ್ಲಕ್ಷ್ಯ ಸೇರಿದಂತೆ ಹತ್ತಾರು ಕಾರಣಗಳಿಗಾಗಿ ಪಂಪ್‍ವೆಲ್ ಫ್ಲೈ ಓವರ್ ಕಾಮಗಾರಿ ಕುಂಟುತ್ತಾ ಸಾಗಿತ್ತು. ರಾಜಕೀಯವಾಗಿಯೂ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಈ ಕಾಮಗಾರಿ, ದೇಶ, ವಿದೇಶಗಳಲ್ಲಿ ಜಾಲತಾಣದ ಮೂಲಕ ದಾಖಲೆ ಪ್ರಮಾಣದಲ್ಲಿ ಟ್ರೋಲ್‍ಗೆ ಒಳಗಾಗಿತ್ತು.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಬುಧವಾರ ಪಂಪ್‍ವೆಲ್ ಫ್ಲೈ ಓವರ್ ಕಾಮಗಾರಿಯನ್ನು ವೀಕ್ಷಿಸಿದ್ದು, ಪ್ರಗತಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಮಾಹಿತಿ ಪಡೆದು ಬಾಕಿ ಉಳಿದ ಸಣ್ಣಪುಟ್ಟ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

Related posts

Leave a Reply

Your email address will not be published. Required fields are marked *