Header Ads
Breaking News

ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಅಗತ್ಯ : ಸಚಿವ ಕೋಟಾ

ಎಷ್ಟೆ ನಿಯಂತ್ರಣ ಮಾಡಿದರೂ ಕೂಡಾ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದೆ, ಹೀಗಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೊನಾ ನಿಯಂತ್ರಣಕ್ಕೆ ಬೇಕಾದ ಎಲ್ಲಾ ರೀತಿಯ ಕೆಲಸಗಳನ್ನು ಸರಕಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನಿನ್ನೆ ನಾನು ಡಿಸಿಎಂ ಮತ್ತು ಸಿಎಂ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂದಿನ ಎರಡು ತಿಂಗಳ ಕಾಲ ಕೊರೊನಾವನ್ನು ಹೇಗೆ ನಿಯಂತ್ರಿಸಬೇಕು ಎಂಬ ಕುರಿತಾಗಿ ಅಧಿಕಾರಿಗಳ ಜೊತೆ ಸೇರಿ ಚರ್ಚೆ ಮಾಡಿದ್ದೇವೆ. ಎಲ್ಲಾ ಖಾಸಗಿ, ಸರಕಾರಿ ಆಸ್ಪತ್ರೆಗಳನ್ನು ಸುಸಜ್ಜಿತವಾಗಿ ಇಡಲಾಗಿದೆ. ಕೊರೊನಾವನ್ನು ಜನಜಾಗೃತಿ ಮೂಲಕ ನಿಯಂತ್ರಣಕ್ಕೆ ತರುತ್ತೇವೆ ಎಂಬ ವಿಶ್ವಾಸ ಸರಕಾರಕ್ಕೆ ಇದೆ ಎಂದರು.

ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳ ಸ್ಥಿತಿಗತಿಗಳ ಕುರಿತು ಮಾತನಾಡಿದ ಸಚಿವರು ” ನಿನ್ನೆ ಡಿಸಿಎಂ ಅಶ್ವತ್ಥ ನಾರಾಯಣ ಜೊತೆ ಮಾತನಾಡಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗೆ ಬೇಕಾದ ಐಸಿಯು, ಆ್ಯಂಬುಲೆನ್ಸ್‍ಗಳನ್ನು ಮಂಜೂರು ಮಾಡಲು ಕೇಳಿಕೊಂಡಿದ್ದೇನೆ. ಜಿಲ್ಲಾದಿಕಾರಿಗಳಿಗೆ ಬೇಕಾದಷ್ಟು ಸಾಮಾಗ್ರಿಗಳನ್ನು ಸರಕಾರ ನೀಡಲು ಸಿದ್ದವಿದೆ ಎಂದರು.

 

Related posts

Leave a Reply

Your email address will not be published. Required fields are marked *