Header Ads
Breaking News

ಕೊರೊನಾ ವೈರಸ್‍ಗೆ ಭಾರತದಲ್ಲಿ 3ನೇ ಬಲಿ : ಮಹಾರಾಷ್ಟ್ರದಲ್ಲಿ 64 ವರ್ಷದ ವ್ಯಕ್ತಿ ಸಾವು

ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ಮಹಾಮಾರಿ ದೇಶಾದ್ಯಂತ ವೇಗವಾಗಿ ಹಬ್ಬಲಾರಂಭಿಸಿದ್ದು, ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ 64 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದವರ ಸಂಖ್ಯೆ 3ಕ್ಕೆ ಏರಿದಂತಾಗಿದೆ. ಮುಂಬೈಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 64ವರ್ಷದ ಕೊರೊನಾ ಸೋಂಕಿಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಇತ್ತೀಚೆಗೆ ಕಲಬುರಗಿಯಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟ ವೃದ್ಧರೊಬ್ಬರಿಗೆ ಮೂರು ದಿನಗಳ ಕಾಲ ಚಿಕಿತ್ಸೆ ನೀಡಿದ ವೈದ್ಯರಲ್ಲೂ ಕೊರೋನ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ. ಕೊರೋನ ಸೋಂಕಿಗೆ ಒಳಗಾಗಿದ್ದ 76 ವರ್ಷದ ವೃದ್ಧರೊಬ್ಬರು ಇತ್ತೀಚೆಗೆ ಮೃತಪಟ್ಟಿದ್ದರು. ಅವರಿಗೆ ಅದಕ್ಕೂ ಮೊದಲು ಮನೆಯಲ್ಲೇ ಮೂರು ದಿನಗಳ ಕಾಲ ಚಿಕಿತ್ಸೆ ನೀಡಿದ್ದ ವೈದ್ಯರೊಬ್ಬರು ಇದೀಗ ಸೋಂಕಿಗೆ ಒಳಗಾಗಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮನೆಯಲ್ಲೇ ಪ್ರತ್ಯೇಕ ನಿಗಾದಲ್ಲಿದ್ದ ಈ ವೈದ್ಯರನ್ನು ಇಂದು ಐಸೋಲೇಶನ್ ವಾರ್ಡ್ ಗೆ ದಾಖಲಿಸಿ ಚಿಕಿತ್ಸೆಗೆ ಕ್ರಮ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *