Header Ads
Breaking News

ಕೊರೋನಾದಿಂದ ಮೃತಪಟ್ಟ ಶಿಕ್ಷಕಿಗೆ ಆಸ್ಪತ್ರೆ ವೆಚ್ಚ ಭರಿಸಿದ ಸರ್ಕಾರ : ಶಾಸಕ ಉಮಾನಾಥ ಕೋಟ್ಯಾನ್ ಮಾಹಿತಿ

ಮೂಡುಬಿದಿರೆ: ಶಿರ್ತಾಡಿ ಮಕ್ಕಿಯ ಜವಹಾರಲಾಲ್ ನೆಹರು ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿದ್ದ ಪದ್ಮಾಕ್ಷಿ ಅವರು ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಸಂದರ್ಭ ಕೊರೊನಾ ಸೋಂಕು ತಗುಲಿ, ಕಳೆದ ಅಕ್ಟೋಬರ್‍ನಲ್ಲಿ ಮೃತಪಟ್ಟಿದ್ದರು. ಅವರ ಆಸ್ಪತ್ರೆಯ ಸಂಪೂರ್ಣ ವೆಚ್ಚ ರೂ.6,21,500 ಅನ್ನು ರಾಜ್ಯ ಸರ್ಕಾರವು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಮಾಹಿತಿ ನೀಡಿದರು.ಶಿಕ್ಷಕಿ ಪದ್ಮಾಕ್ಷಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಮೊತ್ತವನ್ನು ಅವರ ಕುಟುಂಬವು ಭರಿಸಲು ಆಶಕ್ತವಾಗಿತ್ತು. ಈ ನಡುವೆ ಅವರ ಮಗಳು ತಮ್ಮ ಕಷ್ಟವನ್ನು ನನ್ನ ಹಾಗೂ ಸಚಿವರ ಮೂಲಕ ಸರ್ಕಾರದ ಗಮನಕ್ಕೆ ತಂದಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಪದ್ಮಾಕ್ಷಿ ಸಾವನ್ನಪ್ಪಿದರೂ ಕೊಟ್ಟ ಭರವಸೆಯಂತೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಶೀರ್ಘವೇ ಸರ್ಕಾರ ಅವರ ಕುಟುಂಬದವರ ಖಾತೆಗೆ ವರ್ಗಾಯಿಸಲು ಮುಖ್ಯಮಂತ್ರಿಯವರು ಆದೇಶ ಮಾಡಿದ್ದಾರೆ ಎಂದರು. ಮೂಡುಬಿದಿರೆ ಪುರಸಭೆಯ ಅಧ್ಯಕ್ಷ ಪ್ರಸಾದ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಜಿಪಂ ಸದಸ್ಯರಾದ ಕೆ.ಪಿ ಸುಚರಿತ ಶೆಟ್ಟಿ, ಸುಜಾತ, ಮೂಡಾ ಅಧ್ಯಕ್ಷ ಮೇಘನಾದ ಶೆಟ್ಟಿ, ಸದಸ್ಯ ಲಕ್ಷ್ಮಣ್ ಪೂಜಾರಿ, ಹಿರಿಯ ವಕೀಲ ಕೆ.ಆರ್ ಪಂಡಿತ್, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *