Header Ads
Header Ads
Header Ads
Breaking News

ಕೊಲೆ ಪ್ರಕರಣದ ಆರೋಪ ಹೊತ್ತಿರುವ ಇಬ್ಬರು ಸಚಿವರು ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹ ದ.ಕ. ಜಿಲ್ಲಾ ಡಿಸಿ ಕಚೇರಿ ಮುಂಭಾಗ ಬಿಜೆಪಿಯಿಂದ ಪ್ರತಿಭಟನೆ

ಡಿವೈ‌ಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಮತ್ತು ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ಸಚಿವ ಜಾರ್ಜ್ ಮತ್ತು ವಿನಯ್ ಕುಲಕರ್ಣಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಯೋಗೀಶ್ ಭಟ್, ಹಲವಾರು ಪ್ರಕರಣಗಳ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರ ಹೆಸರು ಡಿವೈ‌ಎಸ್‌ಪಿ ಗಣಪತಿ ಸಾವಿನ ಪ್ರಕರಣದಲ್ಲಿ ಕೇಳಿ ಬರುತ್ತಿದೆ.

ಅಲ್ಲದೆ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲಕರ್ಣಿ ಹೆಸರು ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣ ಮತ್ತು ನಂತರ ಹಂತಕರ ರಕ್ಷಣೆಗೆ ಸ್ವತಃ ವಿನಯ ಕುಲಕರ್ಣಿ ಶಾಮೀಲಾಗಿರುವ ಕೆಲವು ಸಾಕ್ಷ್ಯಗಳು ಮಾಧ್ಯಮಗಳ ಮೂಲಕ ಲಭ್ಯವಾಗಿದೆ. ಈ ಪ್ರಕರಣದ ಸೂಕ್ತ ತನಿಖೆ ನಡೆಯಬೇಕಾದರೆ ಸಚಿವ ಸ್ಥಾನದಿಂದ ಇಬ್ಬರು ಸಚಿವರು ರಾಜೀನಾಮೆ ನೀಡುವುದು ಅವಶ್ಯಕವಾಗಿದೆ ಎಂದು ಹೇಳಿದರು.
ಈ ಸಂದರ್ಭ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಯರಾಮ ಶೆಟ್ಟಿ ಮತ್ತಿತ್ತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವರದಿ: ಶರತ್

Related posts

Leave a Reply