Header Ads
Header Ads
Breaking News

ಕೋಟದಲ್ಲಿ ಆಂಬ್ಯುಲೆನ್ಸ್ -ಲಾರಿ ನಡುವೆ ಭೀಕರ ಅಪಘಾತ: ಮೂವರು ಮೃತ್ಯು

ಕುಂದಾಪುರ: ಕಾರವಾದಿಂದ ಮಂಗಳೂರು ಎಜೆ ಆಸ್ಪತ್ರೆಗೆ ತೆರಳುತ್ತಿದ್ದ ಆಂಬುಲೆನ್ಸ್ ಒಂದು ಕೋಟ ಮಣೂರು ಸಮೀಪದಲ್ಲಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಆಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ಚಾಲಕ ಸೇರಿದಂತೆ ಆಂಬುಲೆನ್ಸ್ ನಲ್ಲಿದ್ದ ಆರು ಜನರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೂವರು ಮೃತರು ಒಂದೇ ಕುಟುಂಬದವರಾಗಿದ್ದು, ಕಾರವಾರದ ಅಮದಳ್ಳಿ ನಿವಾಸಿಗಳೆಂದು ಗುರುತಿಸಲಾಗಿದೆ. ಉಲ್ಲಾಸ್ ತಳೇಕರ್(45), ಅಶೋಕ್ ಬಾಡ್ಕರ್(38), ಶೈಲೇಶ್ ತಳೇಕರ್ ಅಪಘಾತದಲ್ಲಿ ಸಾವನ್ನಪ್ಪಿದವರು. ಸರಿತಾ ತರೇಕಳ್ ಹಾಗೂ ಆಂಬುಲೆನ್ಸ್ ಚಾಲಕ ರಾಘವೇಂದ್ರ ಅವರಿಗೆ ಗಾಯಗಳಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೋರ್ವ ಗಾಯಾಳು ಅರವಿಂದ ಅವರಿಗೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಜಾಂಡೀಸ್ ನಿಂದಾಗಿ ಉಲ್ಲಾಸ್ ತರೇಕಳ್ ಕಳೆದ ಕೆಲದಿನಗಳಿಂದ ಕಾರವಾರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ತಡರಾತ್ರಿ ಜಾಂಡೀಸ್ ಉಲ್ಬಣಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ತೆರಳಲು ವೈದ್ಯರು ಸೂಚನೆ ನೀಡಿದ್ದರು. ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ತೆರಳುತ್ತಿದ್ದಾಗ ಕುಂದಾಪುರದ ಕೋಟ ಸಮೀದ ಮಣೂರಿನಲ್ಲಿ ಈ ದುರ್ಘಟನೆ ನಡೆದಿದೆ.ಆಂಬುಲೆನ್ಸ್ ರಸ್ತೆವಿಭಾಜಕವೇರಿ ವಿಭಾಜಕದಲ್ಲಿ ಅಳವಡಿಸಲಾಗಿದ್ದ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದು ಬಳಿಕ ಎದುರಿನಿಂದ ಬರುತ್ತಿದ್ದ ಟ್ಯಾಂಕರ್ಗೆ ಢಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಆಂಬುಲೆನ್ಸ್ ನಜ್ಜುಗುಜ್ಜಾಗಿದ್ದು ಗಾಯಾಳುಗಳು ಆಂಬುಲೆನ್ಸ್ ನೊಳಗೆ ಸಿಲುಕಿದ್ದರು. ಕೂಡಲೇ ಕೋಟ ಪೊಲೀಸರು, ಸ್ಥಳೀಯರು ಹಾಗೂ ಸುರತ್ಕಲ್ ಗೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕರ ತಂಡ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನ ನಡೆಸಿದರಾದರೂ ಅಷ್ಟರಲ್ಲಾಗಲೇ ಮೂವರು ಮೃತಪಟ್ಟಿದ್ದರು.ಸದ್ಯ ಮೃತದೇಹಗಳನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತರ ಕುಟುಂಬಿಕರು ಕುಂದಾಪುರಕ್ಕೆ ಆಗಮಿಸಿದ್ದಾರೆ.

Related posts

Leave a Reply